ಕಾಂಗ್ರೆಸ್ ಪಕ್ಷದಿಂದ ಸಲೀಂ ಉಚ್ಛಾಟನೆ, ವಿ.ಎಸ್ ಉಗ್ರಪ್ಪ ಅಮಾನತು VS Ugrappa saaksha tv
ಬೆಂಗಳೂರು : ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಕಾಂಗ್ರೆಸ್ ನ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ನಡುವಿನ ಚರ್ಚೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗಿದೆ.
ಸಲೀಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದ್ದರೆ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಈ ಇಬ್ಬರು ನಾಯಕರು ಕೆಪಿಸಿಸಿ ವೇದಿಕೆಯಲ್ಲಿಯೇ ರಾಜ್ಯ ಕಾಂಗ್ರೆಸ್ ನಲ್ಲಿ ಪರ್ಸಂಟೇಜ್ ಪಡೆದುಕೊಳ್ಳುವ ವಿಚಾರವಾಗಿ ಚರ್ಚೆ ನಡೆಸಿದ್ದರು.
ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದು ಹೇಳಿದ್ದರು.
ಇದು ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು.
ಅಲ್ಲದೆ ಈ ಇಬ್ಬರ ಹೇಳಿಕೆಯಿಂದ ಕಾಂಗ್ರೆಸ್ ಹಾಗೂ ಡಿ.ಕೆ.ಶಿವಕುಮಾರ್ ಗೆ ಮುಜುಗರ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗಿದೆ.