ವಿಕ್ರಾಂತ್ ರೋಣನಿಗೆ ಬಲ ತುಂಬಲು ಖುದ್ದು ಸಾಥ್ ಕೊಟ್ಟ ಸಲ್ಮಾನ್ ಖಾನ್….
ಸ್ಯಾಂಡಲ್ ವುಡ್ ನ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರ ಜುಲೈ 28ಕ್ಕೆ ಅದ್ದೂರಿಯಾಗಿ ರಿಲೀಸ್ ಆಗಲಿದೆ. ಅದಕ್ಕೂ ಚಿತ್ರತಂಡದಿಂದ ಅಭಿಮಾನಿಗಳಿಗೆ ಹೊಸ ಅಪ್ಡೇಟ್ ಸಿಕ್ಕಿದೆ.
`ವಿಕ್ರಾಂತ್ ರೋಣ’ ಚಿತ್ರದ ಹಿಂದಿ ವಿತರಣೆಯ ಜವಾಬ್ದಾರಿ ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಹೊತ್ತಿಕೊಂಡಿದ್ದಾರೆ. ಈ ಮೂಲಕ ಕಿಚ್ಚನ ಸಿನಿಮಾಗೆ ಸಲ್ಮಾನ್ ಖಾನ್ ಸಾಥ್ ನೀಡಿದ್ದಾರೆ.
ವಿಕ್ರಾಂತ್ ರೋಣ ಹಿಂದಿ ವಿತರಣೆಯ ಜವಾಬ್ದಾರಿಯನ್ನು ಸಲ್ಮಾನ್ ತೆಗೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಚಿತ್ರತಂಡ ಕೂಡ ರಿವೀಲ್ ಮಾಡಿದ್ದು, ಸಲ್ಮಾನ್ ಖಾನ್ ಕೂಡ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಕಿಚ್ಚ ಸುದೀಪ್ ವಿಕ್ರಾಂತ್ ರೋಣ 3ಡಿ ಅವತರಣಿಕೆಯನ್ನು ಹಿಂದಿಯಲ್ಲಿ ಪ್ರೆಸೆಂಟ್ ಮಾಡುತ್ತಿರುವುದು ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.
ಬಿಡುಗಡೆಗೂ ಮೊದಲೇ ವಿಕ್ರಾಂತ್ ರೋಣ ಚಿತ್ರ ದಾಖಲೆ ಬರೆಯುತ್ತಿದೆ. ಓವರ್ಸೀಸ್ ರೈಟ್ಸ್ ಭಾರಿ ಮೊತ್ತಕ್ಕೆ ಮಾರಾಟವಾಗಿದೆ. ಕಿಚ್ಚನ ಬಹುನಿರೀಕ್ಷಿ ಸಿನಿಮಾ ಇದೇ ಜುಲೈ 28ಕ್ಕೆ 3ಡಿಯಲ್ಲಿ ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಅನೂಪ್ ಭಂಡಾರಿ ನಿರ್ದೇಶನದಲ್ಲಿ ಸುದೀಪ್ ಜತೆ ಜಾಕ್ವೆಲಿನ್ ಫೆರ್ನಾಂಡಿಸ್ ನಿರೂಪ್ ಭಂಡಾರಿ, ನೀತಾ ಅಶೋಕ್, ಸೇರಿದಂತೆ ಹಲವರು ನಟಿಸಿದ್ದಾರೆ.