ಕಭಿ ಈದ್ ಕಭಿ ದೀವಾಲಿ ಚಿತ್ರದ ಫಸ್ಟ್ ಲುಕ್ ರಿವಿಲ್ ಮಾಡಿದ ಸಲ್ಮಾನ್

1 min read

ಕಭಿ ಈದ್ ಕಭಿ ದೀವಾಲಿ ಚಿತ್ರದ ಫಸ್ಟ್ ಲುಕ್ ರಿವಿಲ್ ಮಾಡಿದ ಸಲ್ಮಾನ್

ಸಲ್ಮಾನ್ ಖಾನ್ ಅಭಿನಯದ  ಕಭಿ ಈದ್ ಕಭಿ ದೀವಾಲಿ ಚಿತ್ರೀಕರಣ ಪ್ರಾರಂಭವಾಗಿದ್ದ, ಸಲ್ಲು ಭಾಯ್ ಸೆಟ್ ಗೆ ಮರಳಿದ್ದಾರೆ. ಚಿತ್ರದ ಫಸ್ಟ್ ಲುಕ್ ಅನ್ನ ಇಂದು ಸಲ್ಲುಬಾಯ್ Instagram ನಲ್ಲಿ ಬಿಡುಗಡೆ ಮಾಡಿದ್ದಾರೆ.

ಕಭಿ ಈದ್ ಕಭಿ ದೀವಾಲಿನಲ್ಲಿ  ತೆಲುಗು ನಟ ವೆಂಕಟೇಶ್ ದಗ್ಗುಬಾಟಿ ಸಹ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವುದು ವಿಶೇಷ.  ಮೇ 13 ರಂದು ಮುಂಬೈನ ವಿಲೆ ಪಾರ್ಲೆಯಲ್ಲಿ ಹಾಕಲಾಗಿದ್ದ ವಿಶೇಷ ಸೆಟ್‌ನಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ. ಫರ್ಹಾದ್ ಸಾಮ್ಜಿ ನಿರ್ದೇಶನದ ಈ ಚಿತ್ರದಲ್ಲಿ ಪೂಜಾ ಹೆಗ್ಡೆ ಕೂಡ ನಟಿಸುತ್ತಿದ್ದಾರೆ.

ತಮ್ಮ ಚಿತ್ರದ ಅಪ್ಡೇಟ್ ಗಳನ್ನ ಅಭಿಮಾನಿಗಳೊಡನೆ ಹಂಚಿಕೊಳ್ಳುವುದನ್ನ ಸಲ್ಮಾನ್ ಎಂದಿಗೂ ಮರೆಯುವುದಿಲ್ಲ. ಇದೇ ಮೊದಲ ಭಾರಿಗೆ ಉದ್ದ ಕೂದಲಿನಲ್ಲಿ ಕೈಯಲ್ಲಿ ಕಬ್ಬಿಣದ ರಾಡ್ ಹಿಡಿದುಕೊಂಡಿರುವ ಫೋಟೋ ಅಪ್ಲೋಡ್ ಮಾಡಿದ್ದಾರೆ.  ನನ್ನ ಹೊಸ ಚಿತ್ರದ ಶೂಟಿಂಗ್ ಪ್ರಾರಂಭವಾಗಿದೆ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಸಲ್ಮಾನ್ ಖಾನ್ ಇತ್ತೀಚೆಗೆ ಕಭಿ ಈದ್ ಕಭಿ ದೀವಾಲಿ ಚಿತ್ರವನ್ನ ಅನೌನ್ಸ್ ಮಾಡಿದ್ದರು.  ಸಧ್ಯ ಸಲ್ಮಾನ್ ಖಾನ್ ಅವರ ಭಾಗದ ದೃಶ್ಯಗಳನ್ನು ಚಿತ್ರೀಕರಿಸಲಾಗುತ್ತಿದೆ. ನಂತರ ತೆಲುಗು ನಟ ವಿಕ್ಟರಿ ವೆಂಕಟೇಶ್ ಸೇರಿಕೊಳ್ಳಲಿದ್ದಾರೆ. ಫರ್ಹಾದ್ ಸಾಮ್ಜಿ ನಿರ್ದೇಶನದ ಈ ಚಿತ್ರದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿದ್ದಾರೆ.

ಸಾಜಿದ್ ನಾಡಿಯಾಡ್ವಾಲಾ ಬಂಡವಾಳ ಹೂಡಿದ್ದು, ಸಿನಿಮಾ ಡಿಸೆಂಬರ್ 30, 2022 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd