Samantha : ಬಹುಭಾಷಾ ನಟಿ ಸಮಂತಾ ಮತ್ತೆ ಆಸ್ಪತ್ರೆಗೆ ದಾಖಲು???
ಬಹುಭಾಷಾ ನಟಿ ಸಮಂತಾ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದ್ದು, ಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಹೆಚ್ಚಿನ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.
ತಮಿಳಿನ ಖ್ಯಾತ ನಟಿ ಸಮಂತಾ ಮಯೋಸಿಟಿಸ್ (ಸ್ನಾಯು ಅಂಗಾಂಶದ ಉರಿಯೂತ) ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇತ್ತೀಚೆಗೆ ಈ ವಿಷಯವನ್ನು ಸ್ವತಃ ಅವರೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಸಮಂತಾ ಬಾಡಿಗೆ ತಾಯಿಯ ಪಾತ್ರದಲ್ಲಿ, ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ʼಯಶೋಧಾʼ ಚಿತ್ರದ ಪ್ರಮೋಷನ್ ವೇಳೆ ಸಹ ಸಮಂತಾ ತಮ್ಮ ಮಯೋಸಿಟಿಸ್ ಕಾಯಿಲೆ ಬಗ್ಗೆ ಮಾತನಾಡಿದ್ದರು.
ಇದೀಗ ಮತ್ತೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
Samantha: Multilingual actress Samantha admitted to hospital again???








