ಮಂಗಳೂರು: ಕಳೆದ ಹಲವು ತಿಂಗಳಿಂದ ಶಾಂತವಾಗಿದ್ದ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ದುಷ್ಕರ್ಮಿಗಳ ಗುಂಡಿನ ಸದ್ದು ಮತ್ತೆ ಬೆಚ್ಚಿ ಬೀಳುವಂತೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಶಾಂತಿನಗರದಲ್ಲಿ ಅಪರಿಚಿತ ದುಷ್ಕರ್ಮಿಗಳು ಕೊಲೆ ಆರೋಪಿ ಸಂಪತ್ ಕುಮಾರ್ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಗುಂಡೇಟು ತಗುಲಿ ಸಂಪತ್ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂಪತ್ ಕುಮಾರ್, ಕೊಡಗಿನ ಬಿಜೆಪಿ ಮುಖಂಡ ಕಳಗಿ ರಾಮಚಂದ್ರ ಕೊಲೆ ಪ್ರಕರಣದ ಪ್ರಮುಖ ಆರೋಪಿ. ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಸಂಪತ್ ಕುಮಾರ್ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಸುಳ್ಯ ಪೊಲೀಸರು ಹಾಗೂ ಎಫ್ಎಸ್ಎಲ್ ತಂಡದಿಂದ ಪರಿಶೀಲನೆ ನಡೆಯುತ್ತಿದೆ.