ಯಾದಗಿರಿ : ಕಂದಾಯ ಸಚಿವ ಆರ್.ಅಶೋಕ್, ಜಿಲ್ಲೆಯ ಸುರಪುರದಲ್ಲಿ ಕಾಟಚಾರಕ್ಕೆ ನೆರೆ ವೀಕ್ಷಣೆ ಮಾಡಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಸಚಿವರು ಸುರಪುರ ತಾಲೂಕಿನ ದೇವಾಪುರ ಗ್ರಾಮದ ಭತ್ತ ಬೆಳೆದ ಪ್ರದೇಶ ವೀಕ್ಷಣೆ ಮಾಡಿದ್ದು ಕೃಷ್ಣಾ ಪ್ರವಾಹ ಹಾಗೂ ಮಳೆಯಿಂದ ಹಾನಿಯಾದ ಪ್ರದೇಶ ವೀಕ್ಷಣೆ ಮಾಡದ್ದಕ್ಕೆ ಜಿಲ್ಲೆಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೆರೆ ವೀಕ್ಷಣೆಗೆಂದು ದೇವಾಪೂರ ಗ್ರಾಮಕ್ಕೆ ಬಂದ ಸಚಿವರು ಕೇವಲ ಎರಡು ನಿಮಿಷದಲ್ಲಿ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಣೆ ಮಾಡಿ ವಾಪಸ್ ತೆರಳಿದ್ದಾರೆ. ನೆರೆ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್. ಅಶೋಕ್, ಬೆಳೆ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುತ್ತಿದೆ. ಎನ್ ಡಿಆರ್ ಎಫ್ ನಿಯಮದ ಪ್ರಕಾರ ರೈತರಿಗೆ ಬೆಳೆ ಪರಿಹಾರ ನೀಡಲಾಗುತ್ತದೆ. 4 ಸಾವಿರ ಕೋಟಿ ರೂ ಪರಿಹಾರದ ಹಣ ನೀಡಲು ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದರು.









