ಚೀನಾಗೆ ಶಾಕ್ ಕೊಟ್ಟು ಭಾರತದ ಜೊತೆ ಕೈಜೋಡಿಸಿದ ಸ್ಯಾಮ್ ಸಂಗ್ ಸಂಸ್ಥೆ..!
ಉತ್ತರಪ್ರದೇಶ : ಕೊರೊನಾ ತವರು ಚೀನಾಗೆ ಇತ್ತೀಚೆಗೆ ದೊಡ್ಡ ದೊಡ್ಡ ವಿದೇಶಿ ಕಂಪನಿಗಳು , ಬ್ರ್ಯಾಂಡ್ ಗಳು ಸಾಕ್ ಮೇಲೆ ಸಾಕ್ ನೀಡುತ್ತಿವೆ.. ತಮ್ಮ ಬಂಡವಾಳಗಳನ್ನ ಹಿಂಪಡೆಯುತ್ತಿದ್ದು, ಪ್ರಾಜೆಕ್ಟ್ ಗಳನ್ನ ಕೈಬಿಡುತ್ತಿವೆ.. ಇದೀಗ ಜಗತ್ತಿನ ಪ್ರಮುಖ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಸಂಸ್ಥೆ ಸ್ಯಾಮ್ ಸಂಗ್ ಚೀನಾದಲ್ಲಿದ್ದ ತನ್ನ ಡಿಸ್ ಪ್ಲೇ ತಯಾರಿಕಾ ಘಟಕವನ್ನು ಉತ್ತರ ಪ್ರದೇಶದ ನೋಯ್ಡಾಗೆ ಸ್ಥಳಾಂತರಿಸಿದೆ.
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತುಕತೆ ನಡೆಸಿದ ಸಿಇಒ ಕೆನ್ ಕಾಂಗ್ ನೇತೃತ್ವದ ನಿಯೋಗ ನೋಯ್ಡಾದಲ್ಲಿ ಘಟಕದ ನಿರ್ಮಾಣ ಕಾಮಗಾರಿ ಕೆಲಸ ಈಗಾಗಲೇ ಮುಕ್ತಾಯವಾಗಿದೆ ಎಂದು ಸ್ಯಾಮ್ಸಂಗ್ ತಿಳಿಸಿದೆ. ಉತ್ತಮ ಕೈಗಾರಿಕಾ ವಾತಾವರಣ ಮತ್ತು ಹೂಡಿಕೆದಾರ ಸ್ನೇಹಿ ನೀತಿಗಳಿಂದಾಗಿ ಚೀನಾದಲ್ಲಿದ್ದ ಡಿಸ್ಪ್ಲೇ ಘಟಕವನ್ನು ನೋಯ್ಡಾಗೆ ಸ್ಥಳಾಂತರಿಸಿದ್ದೇವೆ ಎಂದು ಕಂಪನಿ ಹೇಳಿದೆ.
ಈ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಅವರು ಪ್ರತಿಕ್ರಿಯೆ ನೀಡಿದ್ದು, ‘ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮದ ಯಶಸ್ಸಿಗೆ ಸ್ಯಾಮ್ ಸಂಗ್ ನ ನೋಯ್ಡಾ ಕಾರ್ಖಾನೆ ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಇದರಿಂದಾಗಿ ರಾಜ್ಯದ ಯುವಕರಿಗೆ ರಾಜ್ಯದಲ್ಲಿ ಉದ್ಯೋಗ ಪಡೆಯಲು ಸಹಾಯವಾಗಲಿದೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಮುಂದಿನ 5 ವರ್ಷದಲ್ಲಿ 11 ಲಕ್ಷ ಕೋಟಿ ಹಣವನ್ನು ಭಾರತ ಮತ್ತು ವಿದೇಶದ ಕಂಪನಿಗಳು ದೇಶದಲ್ಲಿ ಹೂಡಿಕೆ ಮಾಡಲಿವೆ ಎಂದು ತಿಳಿಸಿದ್ದರು.
ಪ್ರಪಂಚದಲ್ಲಿಯೇ ಅತಿದೊಡ್ಡ ಎಲೆಕ್ಟ್ರಾನಿಕ್ ಉಪಕರಣ ಉತ್ಪಾದಕ ಘಟಕವಾಗಿದ್ದು, ನೋಯ್ಡಾದ ಸುಮಾರು 35 ಎಕರೆ ಪ್ರದೇಶದಲ್ಲಿ ತಯಾರಿಕಾ ಘಟಕ ನಿರ್ಮಾಣವಾಗಿದೆ. ಈ ಘಟಕದಲ್ಲಿ ಉತ್ಪನ್ನಗಳಾದ, ಸ್ಮಾರ್ಟ್ ಫೋನ್, ಏರ್ ಕಂಡೀಷನರ್, ರೆಫ್ರಿಜರೇಟರ್, ಫ್ಲ್ಯಾಟ್ ಪ್ಯಾನೆಲ್ ಟಿವಿ, ವಾಷಿಂಗ್ ಮಷಿನ್ ಹಾಗೂ ಅನೇಕ ಉತ್ಪನ್ನಗಳು ತಯಾರಾಗಲಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.