ಜನಪ್ರಿಯ ಸ್ಮಾರ್ಟ್ ಫೋನ್ ಸಂಸ್ಥೆ ಸ್ಯಾಮ್ ಸಂಗ್ ‘ಗ್ಯಾಲಕ್ಸಿ A51’ ಎಂಬ ಹೊಸದಾದ ಸ್ಮಾರ್ಟ್ ಫೋನ್ ಅನ್ನು ದೇಶಿಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ಈ ಮೊದಲು 6GB RAM + 128GB ಸ್ಟೋರೇಜ್ ವೇರಿಯಂಟ್ ಲಭ್ಯವಾಗಿದ್ದು, ಆದರೆ ಇದೀಗ 8GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಅನ್ನು ಪರಿಚಯಿಸಿದೆ.
A51 ಸ್ಮಾರ್ಟ್ ಫೋನ್ ಸೂಪರ್ ಅಮೋಲೆಡ್ ಇನ್ಫಿನಿಟಿ ಒ ಡಿಸ್ ಪ್ಲೇ ಮಾದರಿಯನ್ನು ಹೊಂದಿದ್ದು, 1080×2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಪೂರ್ಣ ಹೆಚ್ಡಿ ಪ್ಲಸ್ ಡಿಸ್ ಪ್ಲೇ ಹೊಂದಿದೆ ಡಿಸ್ ಪ್ಲೇಯ ಅನುಪಾತವು 20:9 ಆಗಿದ್ದು, ಫಿಂಗರ್ ಪ್ರಿಂಟ್ ಸೆನ್ಸಾರ್ ಸೌಲಭ್ಯವನ್ನು ಪಡೆದಿದೆ.
ಗ್ಯಾಲಾಕ್ಸಿ A51 ಸ್ಮಾರ್ಟ್ ಫೋನ್ 6GB RAM + 128GB ಮತ್ತು 8GB RAM+128GB ಆಯ್ಕೆಯ ಎರಡು ವೇರಿಯಂಟ್ ಮಾದರಿಗಳನ್ನು ಹೊಂದಿದ್ದು, 2.3GHz ವೇಗದಲ್ಲಿ Exynos 9611 ಪ್ರೊಸೆಸರ್ ಕಾರ್ಯನಿರ್ವಹಿಸಲಿದೆ. ಎಸ್ ಡಿ ಕಾರ್ಡ್ ಮೂಲಕ ಮೆಮೊರಿಯನ್ನು 512GB ವರೆಗೂ ವಿಸ್ತರಿಸಬಹುದಾಗಿದೆ.
ಗ್ಯಾಲಕ್ಸಿ A51 ಕ್ವಾಡ್ ಕ್ಯಾಮೆರಾ ಸೆಟ್ ಅಪ್ ಅನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಮತ್ತು ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್ ಹೊಂದಿದೆ. ಮೂರು ಮತ್ತು ನಾಲ್ಕನೇ ಕ್ಯಾಮೆರಾಗಳು 5ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿದ್ದು, ಇದರೊಂದಿಗೆ 32ಎಂಪಿ ಸೆನ್ಸಾರ್ ನ ಸೆಲ್ಫಿ ಕ್ಯಾಮೆರಾ ಕೂಡ ಲಭ್ಯವಿದೆ.
ಸ್ಯಾಮ್ ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್ ಫೋನ್ 4,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇದರೊಂದಿಗೆ ಯುಎಸ್ಬಿ ಸಿ ಪೋರ್ಟ್, ವೈಫೈ, ಬ್ಲೂಟೂತ್, ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್ಗಳನ್ನು ಒಳಗೊಂಡಿದೆ
ಸ್ಯಾಮ್ ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್ ಫೋನಿನ ಬ್ಯಾಟರಿ ಸಾಮರ್ಥ್ಯವು 4,000mAh ಆಗಿದ್ದು, ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದರೊಂದಿಗೆ ಯುಎಸ್ಬಿ ಸಿ ಪೋರ್ಟ್, ವೈಫೈ, ಬ್ಲೂಟೂತ್, ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್ಗಳನ್ನು ಸ್ಯಾಮ್ ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್ ಫೋನ್ ಒಳಗೊಂಡಿದೆ.