ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಲಿಂಕ್ ಆರೋಪ ಪ್ರಕರಣ ಸಂಬಂಧ ಖ್ಯಾತ ನಿರೂಪಕಿ ಅನುಶ್ರೀಗೂ ಸಿಸಿಬಿ ನೋಟೀಸ್ ಜಾರಿಯಾಗಿತ್ತು.
ಅದರಂತೆ ಅನುಶ್ರೀ ಇಂದು ಸಿಸಿಬಿ ವಿಚಾರಣೆಗೆ ಹಾಜರಾಗಿದ್ರು.
ವಿಚಾರಣೆ ಮುಗಿದ ನಂತರ ಈ ಕುರಿತಾಗಿ ಮಾತನಾಡಿರುವ ಅವರು ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದು, ಮತ್ತೆ ವಿಚಾರಣೆಗೆ ಕರೆದ್ರೆ ಹಾಜರಾಗುವುದಾಗಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿನ ಸಿಸಿಬಿ ಕಚೇರಿಯಲ್ಲಿ ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದ ಅಧಿಕಾರಿಗಳು ಅನುಶ್ರೀ ವಿಚಾರಣೆ ನಡೆಸಿದ್ದಾರೆ.
ಮಂಗಳೂರಿನಲ್ಲಿ ಸತತ ಮೂರು ಗಂಟೆಗಳ ಸಿಸಿಬಿ ವಿಚಾರಣೆ ಮುಗಿಸಿದ್ದಾರೆ ಅನುಶ್ರೀ.
ಈ ಬಗ್ಗೆ ಮಾತನಾಡಿರುವ ಅನುಶ್ರೀ ತರುಣ್ ರಾಜ್ ನನಗೆ 12 ವರ್ಷಗಳ ಹಿಂದಿನ ಪರಿಚಯವಿದ್ದಾರೆ.
ತರುಣ್ ರಾಜ್ ನನಗೆ 6 ತಿಂಗಳು ಡ್ಯಾನ್ಸ್ ಕೊರಿಯೋಗ್ರಾಫ್ ಮಾಡಿದ್ದಾರೆ. ಈ ವೇಳೆ ಮಾತ್ರ ತರುಣ್ ರಾಜ್ ಪರಿಚಯವಾಗಿದೆ.
ಡ್ರಗ್ಸ್ ಬಗ್ಗೆ ತರಣ್ ಜೊತೆ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟ ಪಡಿಸಿದರು.








