ಗುಡ್ ನ್ಯೂಸ್ ಕೊಟ್ಟ ಆಕ್ಷನ್ ಪ್ರಿನ್ಸ್ – ಮೊದಲ ಮಗುವಿನ ನಿರೀಕ್ಷೆಯಲ್ಲಿ ಧ್ರುವ ಸರ್ಜಾ ದಂಪತಿ
ಸ್ಯಾಂಡಲ್‌ವುಡ್ ಆಕ್ಷನ್ ಪ್ರಿನ್ಸ್ ನಟ ಧ್ರುವ ಸರ್ಜಾ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಧ್ರುವ ಸರ್ಜಾ ದಂಪತಿಗಳು ಮನೆಗೆ ಹೊಸ ಅತಿಥಿಯನ್ನ ಬರಮಾಡಿಕೊಳ್ಳುತ್ತಿದ್ದಾರೆ. ತಾವು ಪೋಷಕರಾಗುತ್ತಿರುವ ವಿಚಾರನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ದಂಪತಿಗಳು ಸೆಪ್ಟಂಬರ್ ನಲ್ಲಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಪತ್ನಿ ಪ್ರೇರಣಾ ಬೇಬಿ ಬಂಪ್ ಪೋಟೋಗಳನ್ನ ಹಂಚಿಕೊಂಡಿರುವ ಧ್ರುವ ಸರ್ಜಾ “ನಾವು ಜೀವನದ ಹೊಸ ಹಂತಕ್ಕೆ ಪ್ರವೇಶಿಸಿದ್ದೇವೆ. ಶೀಘ್ರದಲ್ಲಿ ಬರಲಿರುವ ಮಗುವನ್ನು ಆರ್ಶೀವದಿಸಿ ಎಂದು ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಈ ಬೇಬಿ ಬಂಪ್ ಫೋಟೋಶೂಟ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ.
2019ರಲ್ಲಿ ಧ್ರುವ ಸರ್ಜಾ ಮತ್ತು ಪ್ರೇರಣಾ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇಬ್ಬರೂ ಬಾಲ್ಯದಿಂದ ಸ್ನೇಹಿತರಾಗಿದ್ದು ಫೋಷಕರ ಒಪ್ಪಿಗೆ ಪಡೆದುಕೊಂಡು ಮದುವೆಯಾದ್ದರು. ಇನ್ನು ಸಿನಿಮಾ ಬಗ್ಗೆ ಮಾತನಾಡುವುದಾದರೆ ದ್ರುವ ಸರ್ಜಾ ಮಾರ್ಟೀನ್ ಸಿನಿಮಾದಲ್ಲಿ ಬ್ಯೂಸಿಯಾಗಿದ್ದಾರೆ. ನಂತರ ಜೋಗಿ ಪ್ರೇಮ್ ಜೊತೆಯಲ್ಲಿ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ.