ಕೊರೊನಾ ಲಸಿಕೆ ಪಡೆದ ರೋರಿಂಗ್ ಸ್ಟಾರ್ ಶ್ರೀಮುರಳಿ – ‘ಕೋವಿಡ್ ವಾರಿಯರ್ಸ್ ಗೆ ಧನ್ಯವಾದ’
ದೇಶದಲ್ಲಿ ಕೊರೊನಾ 2ನೇ ಅಲೆ ಜೋರಾಗಿದೆ.. ಮತ್ತೊಂದೆಡೆ ಲಸಿಕೆ ಅಭಿಯಾನವೂ ಪ್ರಗತಿಯಲ್ಲಿದ್ದು, ಮೇ 1ನೇ ತಾರೀಖಿನಿಂದ ದೇಶಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಲಾಗುತ್ತಿದೆ. ಅನೇಕ ಸಿನಿಮಾ ತಾರೆಯರು ಸಹ ಲಸಿಕೆ ಪಡೆಯುತ್ತಿದ್ದಾರೆ. ಅದ್ರಂತೆ ಸ್ಯಾಂಡಲ್ ವುಡ್ ನ ರೋರಿಂಗ್ ಸ್ಟಾರ್ ಶ್ರೀಮುರಳಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದು ಬಳಿಕ ಕೊರೊನಾ ವಾರಿಯರ್ಸ್‌ಗೆ ಧನ್ಯವಾದ ಅರ್ಪಿಸಿದ್ದಾರೆ.
ಕೋವಿಡ್ ಲಸಿಕೆ ಪಡೆದ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ ಶ್ರೀಮುರಳಿ ‘ನನ್ನ ಮೊದಲ ವ್ಯಾಕ್ಸಿನೇಶನ್ ಆಯ್ತು… ಇನ್ನು ಹಾಕಿಸಿಕೊಳ್ಳದವರು ತಡ ಮಾಡ್ಬೇಡಿ, ನಿಮ್ಮ ವಾಕ್ಸಿನೇಶನ್ ಹಾಕಿಸಿಕೊಳ್ಳಿ’ ಎಂದು ಮನವಿ ಮಾಡಿದ್ದಾರೆ. ಅಲ್ಲದೇ ‘ಕೊರೊನಾ ವಾರಿಯರ್ಸ್‌ಗೆ ನಮ್ಮ ಧನ್ಯವಾದ, ಎಲ್ಲರೂ ಮನೆಯಲ್ಲಿರಿ, ಸುರಕ್ಷಿತವಾಗಿರಿ’ ಎಂದು ವಿನಂತಿಸಿದ್ದಾರೆ.
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ. ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.