Amulya | ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಅಮೂಲ್ಯ
ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಅಮೂಲ್ಯ
ಸಂತಸ ಹಂಚಿಕೊಂಡ ನಟಿಯ ಪತಿ ಜಗದೀಶ್
ಫೇಸ್ಬುಕ್ನಲ್ಲಿ ಸಂತಸ ಹಂಚಿಕೊಂಡ ಜಗದೀಶ್
ಜಯನಗರದ ಕ್ಲೈಡ್ ನೈಟ್ ಆಸ್ಪತ್ರೆಯಲ್ಲಿ ಮಕ್ಕಳಿಗೆ ಜನ್ಮ
ಚಂದನವನದ ನಟಿ ಅಮೂಲ್ಯ ಅವರು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ ಮಾಹಿತಿ ನೀಡಿದ್ದಾರೆ.
ಅಮೂಲ್ಯ ಅವರು ಗಂಡು ಮಕ್ಕಳಿಗೆ ಜನ್ಮ ನೀಡಿರುವ ಬಗ್ಗೆ ಜಗದೀಶ್ ಅವರು ಇನ್ ಸ್ಟಾದಲ್ಲಿ ಪೋಸ್ಟ್ ಹಾಕಿದ್ದಾರೆ.
‘ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದು ಜಗದೀಶ್ ಬರೆದುಕೊಂಡಿದ್ದಾರೆ. ಅಮೂಲ್ಯ ಅವರು ಜಯನಗರದ ಕ್ಲೈಡ್ ನೈಟ್ ಆಸ್ಪತ್ರೆಯಲ್ಲಿ ಬೆಳಗ್ಗೆ 11.45ಕ್ಕೆ ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಇನ್ನು ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟ ಅಮೂಲ್ಯ ಅವರು ‘ಚೆಲುವಿನ ಚಿತ್ತಾರ’ದ ಮೂಲಕ ನಾಯಕಿಯಾದರು. ಚೆಲುವಿನ ಚಿತ್ತಾರ ಸಿನಿಮಾ ಅಮೂಲ್ಯ ಅವರನ್ನ ಒಂದೇ ದಿನದಲ್ಲಿ ಸ್ಟಾರ್ ಮಾಡಿತ್ತು. ಅಮೂಲ್ಯ ಅವರು ಗಣೇಶ್, ಯಶ್, ಲವ್ಲೀ ಸ್ಟಾರ್ ಪ್ರೇಮ್, ಕೃಷ್ಣ ಅಜಯ್ ರಾವ್, ದುನಿಯಾ ವಿಜಯ್ ಮುಂತಾದ ಸ್ಟಾರ್ ಕಲಾವಿದರಿಗೆ ಜೋಡಿಯಾಗಿ ನಟಿಸಿದ್ದಾರೆ.
ಚಿತ್ರರಂದಲ್ಲಿ ಸಕ್ರಿಯರಾಗಿದ್ದಾಗಲೇ ಅಮೂಲ್ಯ ಅವರು 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರಾಜಕೀಯ ಹಿನ್ನೆಲೆಯ ಕುಟುಂಬದವರಾದ ಜಗದೀಶ್ ಕೈ ಹಿಡಿದರು.Sandalwood actress Amulya blessed with twin babies