ಕಾಲು ಜಾರಿ ಬಿದ್ದು ಗಾಯಗೊಂಡ ಚಂದನವನದ ಹಿರಿಯ ನಟಿ ಲೀಲಾವತಿ
ಸ್ಯಾಂಡಲ್ ವುಡ್ ನ ಹಿರಿಯ ನಟಿ ಲೀಲಾವತಿ ಅವರು ಬಚ್ಚಲು ಮನೆಯಲ್ಲಿ ಕಾಲು ಜಾರಿಬಿದ್ದು ಗಾಯಮಾಡಿಕೊಂಡಿದ್ದಾರೆ.. ಅವರ ಸೊಂಟ ಮತ್ತು ಕಾಲಿಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ.ಬೆಂಗಳೂರಿನ ಉತ್ತರ ತಾಲೂಕಿನ ಸೋಲದೇವನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಅವರನ್ನು ನೆಲಮಂಗಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಪುತ್ರ ವಿನೋದ್ ರಾಜ್ ಜೊತೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದ ಲೀಲಾವತಿ ಅವರಿಗೆ ವೈದ್ಯರು ಒಂದು ತಿಂಗಳು ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ವಿನೋದ್ ರಾಜ್ ಬಚ್ಚಲು ಮನೆಯಲ್ಲಿ ಬಿದ್ದ ತಕ್ಷಣ ಲೀಲಾವತಿ ಅವರಿಗೆ ಬಾಗಿಲು ತೆಗೆಯಲು ಸಾಧ್ಯವಾಗಿಲ್ಲ. ಸುಮಾರು ಒಂದು ಅರ್ಧ-ಮುಕ್ಕಾಲು ಗಂಟೆ ಒದ್ದಾಡಿದ್ದಾರೆ. ಜೋರಾಗಿ ಕೂಗಿ ಯಾರನ್ನೂ ಕರೆಯಲೂ ಸಾಧ್ಯವಾಗದೇ ಬಚ್ಚಲ ಮನೆಯಲ್ಲೇ ನರಳಾಡಿದ್ದಾರೆ. ಬಳಿಕ ನಿಧಾನವಾಗಿ ಬಾಗಿಲು ತೆಗೆದು ಹೊರಬಂದಿದ್ದಾರೆ ಎಂದು ವಿನೋದ್ ರಾಜ್ ಹೇಳಿದ್ದಾರೆ.
ಆ.11 ರವರೆಗೂ ರಾಜ್ಯದಲ್ಲಿ ಭಾರಿ ಮಳೆ
ನಟಿ ಲೀಲಾವತಿ ಅವರಿಗೆ 83 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆ ಇಂದ ಬಳಲುತ್ತಿದ್ದಾರೆ. ನಟಿ ಲೀಲಾವತಿ ಕನ್ನಡ ಸೇರಿದಂತೆ ತಮಿಳು, ಮಲಯಾಳಂ ಮತ್ತು ತೆಲುಗು ಸಿನಿಮಾಗಳಲ್ಲೂ ನಟಿಸಿದ್ದಾರೆ. ಮಾಂಗಲ್ಯ ಯೋಗ ಸಿನಿಮಾ ಮೂಲಕ ಬಣ್ಣದ ಜಗತ್ತಿಗೆ ಕಾಲಿಟ್ಟ ಲೀಲಾವತಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ನಾಯಕಿಯಾಗಿ, ಪೋಷಕ ನಟಿಯಾಗಿ 3 ದಶಕಗಳಿಗೂ ಹೆಚ್ಚು ಕಾಲ ಕನ್ನಡ ಚಿತ್ರಾಭಿಮಾನಿಗಳನ್ನು ರಂಜಿಸಿದ್ದಾರೆ.