ಸ್ಯಾಂಡಲ್ವುಡ್ ನಟಿ ರಾಗಿಣಿಗೆ ಬೆಳ್ಳಂಬೆಳಗ್ಗೆಯೇ ಪೊಲೀಸರಿಂದ ಶಾಕ್
ಬೆಂಗಳೂರು, ಸೆಪ್ಟೆಂಬರ್04: ಶುಕ್ರವಾರ ಬೆಳ್ಳಂಬೆಳಗ್ಗೆಯೇ ಸ್ಯಾಂಡಲ್ವುಡ್ನ ಮಾದಕ ನಟಿ ರಾಗಿಣಿಗೆ ಸಿಸಿಬಿ ಪೊಲೀಸರು ಶಾಕ್ ನೀಡಿದ್ದಾರೆ.
ಯಲಹಂಕದ ಜ್ಯುಡಿಷಿನಲ್ ಲೇಔಟ್ ಅಪಾರ್ಟ್ಮೆಂಟ್ ನಲ್ಲಿರುವ ರಾಗಿಣಿ ನಿವಾಸಕ್ಕೆ ಸರ್ಚ್ ವಾರೆಂಟ್ನೊಂದಿಗೆ ತೆರಳಿರುವ ಸಿಸಿಬಿ ಪೊಲೀಸರು ಈಗಾಗಲೇ ಶೋಧಕಾರ್ಯ ಶುರುಮಾಡಿದ್ದಾರೆ.
ನಟಿ ರಾಗಿಣಿ ತಮ್ಮ ಅಪಾರ್ಟ್ಮೆಂಟ್ ನಲ್ಲೇ ಇದ್ದು, ಶೋಧ ಕಾರ್ಯಕ್ಕೆ ಸಹಕಾರ ನೀಡುತ್ತಿರುವುದಾಗಿ ಮೂಲಗಳು ತಿಳಿಸಿವೆ. ನಿನ್ನೆಯಷ್ಟೇ ಡ್ರಗ್ಸ್ ಮಾಫಿಯಾ ಸಂಬಂಧ ರಾಗಿಣಿ ಸ್ನೇಹಿತ ರವಿಶಂಕರ್ನನ್ನು ಬಂಧಿಸಿದ್ದ ಪೊಲೀಸರು ನಟಿ ಸಂಜನಾ ಗುರ್ಲಾನಿ ಆಪ್ತ ರಾಹುಲ್ ಮತ್ತು ಕಾರ್ತಿಕ್ ರನ್ನು ವಶಕ್ಕೆ ತೆಗೆದುಕೊಂಡಿದ್ದರು.
ರಾಗಿಣಿ ಮನೆಯಲ್ಲಿ ಶೋಧಕಾರ್ಯ ಆರಂಭಿಸಿರುವ ಪೊಲೀಸರು ಮಾಹಿತಿ, ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದಾರೆ. ಸಿಸಿಬಿ ಇನ್ಸ್ಪೆಕ್ಟರ್ ಅಂಜುಮಾಲಾ ನಾಯಕ್ ನೇತೃತ್ವದಲ್ಲಿ 4 ಮಹಿಳಾ, ಇಬ್ಬರು ಪುರುಷ ಅಧಿಕಾರಿಗಳು ಸೇರಿ ಹತ್ತಕ್ಕೂ ಹೆಚ್ಚು ಪೊಲೀಸರನ್ನು ಒಳಗೊಂಡ ತಂಡವು ಈ ಶೋಧ ಕಾರ್ಯದಲ್ಲಿ ನಿರತವಾಗಿದೆ.