ADVERTISEMENT
Monday, September 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

Sandalwood : ಖ್ಯಾತ ಹಾಸ್ಯ ನಟ ಉಮೇಶ್ ಸಿನಿ ಪಯಣಕ್ಕೆ 62ನೇ ಸಂಭ್ರಮ..!!

ಖ್ಯಾತ ಹಾಸ್ಯ ನಟ ಉಮೇಶ್ ಸಿನಿ ಪಯಣಕ್ಕೆ 62ನೇ ಸಂಭ್ರಮ..ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಅಭಿನಂದನ ಕಾರ್ಯಕ್ರಮ

Namratha Rao by Namratha Rao
August 13, 2022
in Uncategorized
Share on FacebookShare on TwitterShare on WhatsappShare on Telegram

ಖ್ಯಾತ ಹಾಸ್ಯ ನಟ ಉಮೇಶ್ ಸಿನಿ ಪಯಣಕ್ಕೆ 62ನೇ ಸಂಭ್ರಮ..ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಅಭಿನಂದನ ಕಾರ್ಯಕ್ರಮ

ಕನ್ನಡ ರಂಗಭೂಮಿ ಹಾಗೂ ಚಲನಚಿತ್ರರಂಗದ ಹಿರಿಯ ಹಾಸ್ಯ ಕಲಾವಿದರಾದ ಎಂ.ಎಸ್.ಉಮೇಶ್ ಕಿರುತೆರೆಯಲ್ಲೂ ಜನಪ್ರಿಯರು. ನಾಟಕಗಳಲ್ಲಿ ಬಾಲ ಕಲಾವಿದರಾಗಿ ಅಭಿನಯಿಸುತ್ತಿದ್ದ ಉಮೇಶ್ ಚಲನಚಿತ್ರ ರಂಗಕ್ಕೆ ‘ಮಕ್ಕಳ ರಾಜ್ಯ’ ಚಿತ್ರದ ಮೂಲಕ ಅಡಿಯಿಟ್ಟರು. ಕನ್ನಡದ ಸುಮಾರು 250ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ವಿವಿಧ ಬಗೆಯ ಪಾತ್ರಗಳನ್ನು ಪೋಷಿಸಿರುವ ಉಮೇಶ್ ಹಾಸ್ಯ ನಟರಾಗಿ ಹೆಸರುವಾಸಿ. ಕಥಾಸಂಗಮದ ‘ಮುನಿತಾಯಿ’ಯಲ್ಲಿ ತಿಮ್ಮರಾಯಿ ಪಾತ್ರ ಅವರ ಕಲಾ ಪ್ರೌಢಿಮೆಯನ್ನು ಬೆಳಕಿಗೆ ತಂದಿತ್ತು. ಈ ಪಾತ್ರಕ್ಕೆ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಗೆ ಮುತ್ತಿಟ್ಟಿರುವ ಉಮೇಶ್ ಕಲಾ ಪಯಣಕ್ಕೆ 62ರ ಸಂಭ್ರಮ.

Related posts

saakshatv.com/param-vihara-16th-edition-veena-jugalbandi-and-odissi-dance-at-suchitra-academy-bengaluru-september-26

ಸೆ. 26ಕ್ಕೆ ‘ಪರಮ್ ವಿಹಾರ’ದ ವೀಣಾ ನಾದ, ಒಡಿಸ್ಸಿ ನೃತ್ಯ ವೈಭವ

September 22, 2026
kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 21, 2026

ಉಮೇಶ್ ಚಿತ್ರರಂಗದಲ್ಲಿ ಐವತ್ತು ವರ್ಷ ಪೂರೈಸಿರುವ ಹಿನ್ನೆಲೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಭಿನಂದನ ಸಲ್ಲಿಸಿದೆ. ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ.ಹರೀಶ್ ನೇತೃತ್ವದಲ್ಲಿ ಉಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ವೇಳೆ ಚಿತ್ರರಂಗದ ಮತ್ತೊಬ್ಬ ಹಿರಿಯ ಕಲಾವಿದರಾದ ಬೆಂಗಳೂರು ನಾಗೇಶ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 60 ವರ್ಷ ಪೂರೈಸಿದ ಹಿನ್ನೆಲೆ ಅವರನ್ನು ಕೂಡ ಸನ್ಮಾನಿಸಲಾಯಿತು.

ಉಮೇಶ್ ಮಾತನಾಡಿ, ಇದು ನನ್ನು ಸುದಿನ ಅಂತ ಭಾವಿಸ್ತೀನಿ. ಚಿತ್ರರಂಗ ನನ್ನನ್ನ ಮನೆ ಮಗನಂತೆ ನೋಡಿದೆ. ಅಭಿಮಾನಿ ಅನ್ನದಾತರಿಂದ ಇಲ್ಲಿದ್ದೇನೆ. ಕಲಾಸೇವೆ ಮಾಡೋ ಅವಕಾಶ ಸಿಕ್ಕಿದ್ದು ಪುಣ್ಯ. ಕನ್ನಡ ಚಿತ್ರರಂಗದ ನಿರ್ಮಾಪಕರು, ನಿರ್ದೇಶಕರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಭಾ.ಮಾ.ಹರೀಶ್ ಮಾತನಾಡಿ, ಹಿರಿಯ ಕಲಾವಿದ ಉಮೇಶ್ ಅವರು ಸನ್ಮಾನ ಸ್ವೀಕರಿಸಿರುವುದು ಖುಷಿ ಕೊಟ್ಟಿದೆ. ನಿಮ್ಮ ಆಶೀರ್ವಾದ ಕನ್ನಡ ಇಂಡಸ್ಟ್ರೀ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೇಲೆ ಇರಲಿ. ಹೊಸ ನಿರ್ದೇಶಕರು, ನಿರ್ಮಾಪಕರನ್ನು ಕರೆಸಿ ಪೋಷಕ ಕಲಾವಿದರ ಸಂಘದ ಮೂಲಕ ನೆನೆಪಿಸಿಕೊಳ್ಳುವ ಕೆಲಸ ಮಾಡುತ್ತೇವೆ ಎಂದರು.

ಐದು ದಶಕಗಳಿಗೂ ಹೆಚ್ಚು ಕಾಲದಿಂದ ಕಲಾವಿದರಾಗಿ ಸಕ್ರಿಯರಾಗಿರುವ ಉಮೇಶ್, ‘ಗೋಲ್ ಮಾಲ್ ರಾಧಾಕೃಷ್ಣ’ ಸಿನಿಮಾದಲ್ಲಿ ಅವರ ಡೈಲಾಗ್ ಇಂದಿಗೂ ಪ್ರೇಕ್ಷಕರ ಮನಸ್ಸಿನಲ್ಲಿ ಉಳಿದುಬಿಟ್ಟಿದೆ. “ಅಯ್ಯೋ ತಪ್ಪಾಯ್ತು ಎಂಬ ಡೈಲಾಗ್ ಉಮೇಶ್ ಅವರನ್ನು ನೋಡಿದರೆ ನೆನಪಾಗುತ್ತದೆ. ವರನಟ ಡಾ.ರಾಜ್ ಕುಮಾರ್ ಜೊತೆ ‘ಶೃತಿ ಸೇರಿದಾಗ’ ಚಿತ್ರದಲ್ಲಿನ “ಇದು ಬೊಂಬೆಯಾಟವಯ್ಯಾ” ಹಾಡಿನಲ್ಲಿ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದರು. ಹಾಲು ಜೇನು, ಶ್ರಾವಣ ಬಂತು, ಗುರುಶಿಷ್ಯರು, ಮಲಯಮಾರುತ, ನೀನು ನಕ್ಕರೆ ಹಾಲು ಸಕ್ಕರೆ, ಚೈತ್ರದ ಪ್ರೇಮಾಂಜಲಿ ಚಿತ್ರಗಳು ಸೇರಿದಂತೆ ಹಲವು ಚಿತ್ರಗಳಲ್ಲಿ ಉಮೇಶ್ ಅಮೋಘವಾಗಿ ನಟಿಸಿದ್ದಾರೆ. ಎಲ್ಲರಂತಲ್ಲ ನನ್ನ ಗಂಡ, ಜೇನುಗೂಡು, ಚನ್ನ ಸಿನಿಮಾ ಚಿತ್ರಗಳನ್ನು ಉಮೇಶ್ ನಿರ್ದೇಶನ ಮಾಡಿದ್ದಾರೆ.

Tags: comedian umeshkannada filmsSandalwood
ShareTweetSendShare
Join us on:

Related Posts

saakshatv.com/param-vihara-16th-edition-veena-jugalbandi-and-odissi-dance-at-suchitra-academy-bengaluru-september-26

ಸೆ. 26ಕ್ಕೆ ‘ಪರಮ್ ವಿಹಾರ’ದ ವೀಣಾ ನಾದ, ಒಡಿಸ್ಸಿ ನೃತ್ಯ ವೈಭವ

by admin
September 22, 2026
0

ಸೆ.26ಕ್ಕೆ 'ಪರಮ್ ವಿಹಾರ'ದ ವೀಣಾ ನಾದ, ಒಡಿಸ್ಸಿ ನೃತ್ಯ ವೈಭವ • ಬನಶಂಕರಿಯಲ್ಲಿ ಕಾರ್ಯಕ್ರಮ ಪರಮ್‌ ವಿಹಾರದ 16ನೇ ಆವೃತ್ತಿ ಕಾರ್ಯಕ್ರಮ • ಬನಶಂಕರಿಯ ಸುಚಿತ್ರಾ ಸಭಾಂಗಣದಲ್ಲಿ...

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 21, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

preetham-gubbi-directs-my-baby-starring-sumukha-and-eesha

ಪ್ರೀತಮ್ ಗುಬ್ಬಿ ನಿರ್ದೇಶನದ ‘ಮೈ ಬೇಬಿ’ಗೆ ಸುಮಖ ಮತ್ತು ಈಶಾ ನಾಯಕ-ನಾಯಕಿ

by admin
September 21, 2026
0

ಪ್ರೀತಮ್ ಗುಬ್ಬಿ ನಿರ್ದೇಶನದ ‘ಮೈ ಬೇಬಿ’ಗೆ ಸುಮಖ ಮತ್ತು ಈಶಾ ನಾಯಕ-ನಾಯಕಿ ಹೊಸ ತಲೆಮಾರಿನ ಪ್ರೀತಿ, ಅವರದೇ ಆದ ಬದುಕಿನ ಆಯ್ಕೆಗಳು ಮತ್ತು ಒಟ್ಟಿಗೆ ಸಾಗುವ ಪಯಣದ...

shivarajkumar-starrer-bail-official-trailer-released-pawan-wadeyar-kvn-productions

ಆಕ್ಷನ್ ಡ್ರಾಮಾ ‘ಬೇಲ್’ ಚಿತ್ರದ ಅಧಿಕೃತ ಟ್ರೈಲರ್ ಬಿಡುಗಡೆ

by admin
September 21, 2026
0

ಬೆಂಗಳೂರು: ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಆಕ್ಷನ್ ಡ್ರಾಮಾ 'ಬೇಲ್' ಚಿತ್ರದ ಅಧಿಕೃತ ಟ್ರೈಲರ್ ಅಂತಿಮವಾಗಿ ಬಿಡುಗಡೆಯಾಗಿದೆ. ಪ್ರತಿಷ್ಠಿತ ಕೆವಿಎನ್ ಪ್ರೊಡಕ್ಷನ್ಸ್...

allu-arjun-atlee-raka-movie-creates-guinness-world-record-in-motion-capture

ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ: ʻಐಕಾನ್ ಸ್ಟಾರ್ʼ ಅಲ್ಲು ಅರ್ಜುನ್ – ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by admin
September 21, 2026
0

ಹೈದರಾಬಾದ್: ಭಾರತೀಯ ಚಿತ್ರರಂಗದ ತಾಂತ್ರಿಕ ಪಯಣದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ವದ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಾಯಕರಾಗಿ ನಟಿಸುತ್ತಿರುವ, ಖ್ಯಾತ ನಿರ್ದೇಶಕ ಅಟ್ಲಿ ಸಾರಥ್ಯದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram