ಬೆಂಗಳೂರು : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಅನುಶ್ರೀ ಸಿಸಿಬಿ ಸಮನ್ಸ್ ಜಾರಿ ಮಾಡಿದೆ. ಈ ಕುರಿತು ಮಾಧ್ಯಮ ಸಂಸ್ಥೆ ಜೊತೆ ಮಾತನಾಡಿದ ಅನುಶ್ರೀ, ನನಗೆ ಯಾವುದೇ ನೋಟಿಸ್ ಬಂದಿಲ್ಲ.
ಯಾವ ನೋಟಿಸ್ ಎಂಬುವುದು ನನಗೆ ಗೊತ್ತಾಗುತ್ತಿಲ್ಲ. ನನಗೆ ಯಾವುದೇ ನೋಟಿಸ್ ತಲುಪಿಲ್ಲ. ನನ್ನ ಮೊಬೈಲಿಗೆ ಸಮನ್ಸ್ ಸಹ ಬಂದಿಲ್ಲ. ಮಂಗಳೂರಿನ ಮನೆಯಲ್ಲಿಯೂ ನಾವು ಯಾರು ಇಲ್ಲ.
ಸುದ್ದಿ ಬಿತ್ತರವಾಗುತ್ತಿದ್ದಂತೆ ನಾನು ಮಂಗಳೂರಿನ ಮನೆಯ ಬಳಿ ಕೆಲವರನ್ನ ಕಳಿಸಿ ವಿಚಾರಿಸಿದೆ. ನಾನು, ಅಮ್ಮ ಮತ್ತು ತಮ್ಮ ಬೆಂಗಳೂರಿನಲ್ಲಿಯೇ ಇದ್ದೇನೆ ಎಂದು ಹೇಳಿದ್ದಾರೆ.
ಇದೇ ವೇಳೆ ಕಿಶೋರ್ ಶೆಟ್ಟಿ ಮತ್ತು ತರುಣ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅನುಶ್ರೀ, ಕಿಶೋರ್ ಶೆಟ್ಟಿ ಜತೆ 10 ವರ್ಷದ ಹಿಂದೆ ಡ್ಯಾನ್ಸ್ ಶೋನಲ್ಲಿ ಭಾಗವಹಿಸಿದ್ದೆ ಅಷ್ಟೆ.
ಕಿಶೋರ್ ನನಗೆ ಅಷ್ಟಾಗಿ ಪರಿಚಯವಿಲ್ಲ. ಈ ವಿಷಯ ಕೇಳಿ ನನ್ನ ಮನೆಯವರು ತುಂಬಾ ಭಯಪಟ್ಟಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.
ಮಂಗಳೂರು ಸಿಸಿಬಿ ಪೊಲೀಸರ ಬಂಧನದಲ್ಲಿರುವ ಡ್ಯಾನ್ಸರ್ ಕಿಶೋರ್ ಶೆಟ್ಟಿ ಮತ್ತು ಆತನ ಆಪ್ತ ತರುಣ್ ಹೇಳಿಕೆಯನ್ನಾಧರಿಸಿ ಅನುಶ್ರೀ ಅವರಿಗೆ ವಾಟ್ಸಪ್ ಮೂಲಕ ನೋಟಿಸ್ ನೀಡಿದೆ ಎಂದು ತಿಳಿದು ಬಂದಿದೆ.