ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುದ್ದೆ ಮುರಿಯುತ್ತಿರುವ ನಟಿ ರಾಗಿಣಿ ದ್ವಿವೇದಿ, ಜಾಮೀನು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಡ್ರಗ್ಸ್ ಕೇಸಲ್ಲಿ ಬಂಧಿಯಾಗಿರುವ ರಾಗಿಣಿ ದ್ವಿವೇದಿ ಸೇರಿದಂತೆ ಇತರೆ ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ನವೆಂಬರ್ 3ರಂದು ವಜಾಗೊಳಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಗಿಣಿ ದ್ವಿವೇದಿ ಪರ ಗುಜರಾತ್ ಮೂಲದ ವಕೀಲರೊಬ್ಬರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಮುಂದಿನ ಡಿಸೆಂಬರ್ 4ರಂದು ರಾಗಿಣಿ ದ್ವಿವೇದಿ ಅರ್ಜಿ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆಗೆ ಬರಲಿದೆ. ಸೆಪ್ಟೆಂಬರ್ 4ರಂದು ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ನಟಿ ರಾಗಿಣಿ ದ್ವಿವೇದಿ ಅವರನ್ನು ಬಂಧಿಸಿದ್ದರು. ಸತತ ಒಂದು ವಾರಗಳ ಕಾಲ ಸಿಸಿಬಿ ಪೊಲೀಸರು ರಾಗಿಣಿ ದ್ವಿವೇದಿ ಅವರಿಗೆ ಇರುವ ಡ್ರಗ್ಸ್ ಜಾಲದ ನಂಟಿನ ತನಿಖೆ ನಡೆಸಿದ್ದಾರೆ.
ರಾಗಿಣಿ ದ್ವಿವೇದಿ ವಿರುದ್ಧ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಕಾಯ್ದೆ(ಎನ್‍ಡಿಪಿಎಸ್) ಅಡಿ ಪ್ರಕರಣ ದಾಖಲಾಗಿದೆ. ಹೀಗಾಗಿ ಸದ್ಯಕ್ಕೆ ರಾಗಿಣಿಗೆ ಜಾಮೀನು ಸಿಗುವುದು ಅನುಮಾನ ಎನ್ನಲಾಗಿದೆ. ಈ ಕಾರಣಕ್ಕಾಗಿಯೇ ರಾಗಿಣಿ, ಸುಪ್ರೀಂಕೋರ್ಟ್ ಕದತಟ್ಟಿದ್ದಾರೆ.
ಯಾವುದೇ ಆರೋಪಿಯನ್ನು ಬಂಧಿಸಿದ 3 ತಿಂಗಳೊಳಗೆ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಬೇಕು. 3 ತಿಂಗಳೊಳಗೆ ಚಾರ್ಜ್‍ಶೀಟ್ ಸಲ್ಲಿಸದೇ ಹೋದರೆ ಕೆಲವು ಪ್ರಕರಣಗಳಲ್ಲಿ ಆರೋಪಿ ಸ್ಥಾನದಲ್ಲಿರುವವರಿಗೆ ಜಾಮೀನು ಸಿಗುವ ಸಾಧ್ಯತೆಗಳಿವೆ. ಇದೇ ಭರವಸೆಯೊಂದಿಗೆ ರಾಗಿಣಿ ಸುಪ್ರೀಂಕೋರ್ಟ್‍ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂಕೋರ್ಟ್‍ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡರೆ ಕೆಳ ನ್ಯಾಯಾಲಯದಲ್ಲಿಯೇ ಅರ್ಜಿ ಸಲ್ಲಿಸಬೇಕಾಗುತ್ತದೆ. ಕೆಳ ನ್ಯಾಯಾಲಯ ಜಾಮೀನು ನೀಡುವವರೆಗೆ ಅಥವಾ ವಿಚಾರಣೆ ಪೂರ್ಣಗೊಂಡು ತೀರ್ಪು ಬರುವವರೆಗೆ ಆರೋಪಿಗಳು ಜೈಲಿನಲ್ಲಿ ಇರಲೇಬೇಕಾಗುತ್ತದೆ.
ಹೀಗಾಗಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ಆಧಾರದ ಮೇಲೆ ಇತರೆ ಆರೋಪಿಗಳಾದ ಸಂಜನಾ ಗಲ್ರಾನಿ, ರವಿಶಂಕರ್ ಸೇರಿದಂತೆ ಇತರರ ಭವಿಷ್ಯ ನಿರ್ಧಾರವಾಗಲಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel