ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆ ಬಗ್ಗೆ ಕನ್ನಡ ಚಿತ್ರರಂಗಕ್ಕೆ ಕಳಂಕ ತಟ್ಟಿರುವ ಹಿನ್ನೆಲೆಯಲ್ಲಿ ಫಿಲ್ಮ್ ಛೇಂಬರ್‍ನಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ.
ಹ್ಯಾಟ್ರಿಕ್ ಹೀರೋ ಶಿವವರಾಜ ಕುಮಾರ್ ನೇತೃತ್ವದಲ್ಲಿ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಯಲಿದೆ.
ಮಾಣಿಜ್ಯ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರಿದಂತೆ ಕನ್ನಡ ಚಿತ್ರರಂಗದ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಡ್ರಗ್ಸ್ ದಂಧೆಯಲ್ಲಿ ಯಾವುದೇ ನಟ-ನಟಿ ಅಥವಾ ನಿರ್ಮಾಪಕ, ನಿರ್ದೇಶಕರ ಹೆಸರು ಬಂದರೆ ಏನು ಮಾಡಬೇಕು, ಚಿತ್ರರಂಗದಿಂದ ನಿರ್ಬಂಧ ವಿಧಿಸಬಹುದೇ ಅಥವಾ ಮುಂದೇನು ಮಾಡಬಹುದು, ಕನ್ನಡ ಚಿತ್ರರಂಗಕ್ಕೆ ಎದುರಾಗಿರುವ ಕಳಂಕ ದೂರ ಮಾಡುವುದು ಹೇಗೆ ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಸಭೆಯ ನಂತರ ಸುಮಾರು ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಸ್ಯಾಂಡಲ್‍ವುಡ್‍ನ ಸದ್ಯದ ಬೆಳವಣಿಗೆಗಳು ಹಾಗೂ ಸಭೆಯಲ್ಲಿ ಆದ ತೀರ್ಮಾನಗಳ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ ಇದೆ.
************************
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.