ಸಿನಿಮಾ ಕಲಾವಿದರ ನೆರವಿಗೆ ನಿಂತ ನಟಿ ಲೀಲಾವತಿ ಮಗ ವಿನೋದ್ ರಾಜ್
ಬೆಂಗಳೂರು: ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.
ಇನ್ನೂ ಇತ್ತೀಚೆಗೆ ನಟಿ ಲೀಲಾವತಿ ಹಾಗೂ ಅವರ ಪುತ್ರ ನಟ ವಿನೋದ್ ಕುಮಾರ್ ಅವರು ಕೂಡ ನೂರಾರು ಕುಟುಂಬಗಳಿಗೆ ನೆರವಾಗಿದ್ದಾರೆ. ಬೆಂಗಳೂರಿನ ಸುಮ್ಮನಹಳ್ಳಿಯ ಬಳಿ ಕಲಾವಿದರ ಕುಟುಂಬಕ್ಕೆ ದಿನಸಿ ಕಿಟ್ ವಿತರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಸಿನಿಮಾದ ಹಿರಿಯ ಕಲಾವಿದರ ನೂರಾರು ಕುಟುಂಬಕ್ಕೆ 14 ದಿನಕ್ಕೆ ಆಗುವಂತೆ ದಿನಸಿ ಹಾಗೂ ತರಕಾರಿ ವಿತರಣೆ ಮಾಡಿದ್ದಾರೆ. ಸಿನಿಮಾ ಕಲಾವಿದರ ನೆರವಿಗೆ ನಿಂತ ನಟಿ ಲೀಲಾವತಿ ಮಗ ವಿನೋದ್ ರಾಜ್ ಅವರು ತಮ್ಮ ತೋಟದಲ್ಲಿ ಸ್ವತಃ ಬೆಳೆದ ತರಕಾರಿ ಹಣ್ಣುಗಳ ವಿತರಣೆ ಮಾಡಿದ್ದಾರೆ.