ಸ್ಯಾಂಡಲ್ ವುಡ್ ನ ಹಿರಿಯ ನಟ ಶಂಕರ್ ರಾವ್ ವಿಧಿವಶ
ಸ್ಯಾಂಡಲ್ ವುಡ್ ನ ಹಿರಿಯ ನಟ ಶಂಕರ್ ರಾವ್ ಅವರು ಇಂದು ವಿಧಿವಶರಾಗಿದ್ದಾರೆ. ಇವರು ಒಂದು ಕಾಲದಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿದ್ದ ಪಾಪ ಪಾಂಡು ಧಾರವಾಹಿಯ ಮೂಲಕ ಖ್ಯಾತಿ ಗಳಿಸಿದ್ದರು. ಇದೀಗ 84 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಶಂಕರ್ ಅವರು ಹಲವು ದಿನಗಳಿಂದ ಆರೋಗ್ಯ ಸಮಸ್ಯ ಎದುರಿಸುತ್ತಿದ್ದರು. ಅಲ್ಲದೇ ಚಿಕಿತ್ಸೆ ಕೂಡ ಪಡೆಯುತ್ತಿದ್ದರು ಎನ್ನಲಾಗಿದೆ. ಇಂದು ಬೆಳಿಗ್ಗೆ 6.30ಕ್ಕೆ ಶಂಕರ್ ಅವರು ಕೊನೆಯುಸಿರೆಳೆದಿದ್ದಾರೆ. ಮೊದಲಿಗೆ ರಂಗಭೂಮಿ ಪ್ರವೇಶಿಸಿದ ಶಂಕರ್ ಅವರು ನಂತರ ಧಾರಾವಾಹಿ ಸಿನಿಮಾಗಳಲ್ಲಿ ಸಕ್ರಿಯರಾಗಿದ್ದರು. ಬನಶಂಕರಿ ಚಿತಾಗಾರದಲ್ಲಿ ಶಂಕರ್ ರಾವ್ ಅಂತ್ಯಕ್ರಿಯೆ ನೆರವೇರಲಿದೆ.