ಕನ್ನಡ ಚಿತ್ರರಂಗದ ಯುವ ನಿರ್ದೇಶಕ ‘ಕಂಠಿ’ ಸಾರಥಿ ಭರತ್ ವಿಧಿವಶ..!
ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ನಿರ್ದೇಶಕರಾದ ಭರತ್ ಅವರು ತಡರಾತ್ರಿ ವಿಧಿವಶರಾಗಿದ್ದಾರೆ. ರೋರಿಂಗ್ ಸ್ಟಾರ್ ಶ್ರೀಮುರುಳಿ ನಟನೆಯ ಕಂಠಿ ಸೇರಿ ಹಲವು ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿರುವ ಯುವ ನಿರ್ದೇಶಕ ಭರತ್ ಅವರ ಹತಾಠ್ ನಿಧನಕ್ಕೆ ಚಿತ್ರರಂಗದವರು ಕಂಬನಿ ಮಿಡಿದಿದ್ದಾರೆ.
ಕೊರೊನಾ ಸೋಂಕಿನ ಭೀತಿ : ಪರಿವಾರಕ್ಕಾಗಿ ಸೆಲ್ಫ್ ಕ್ವಾರಂಟೈನಲ್ಲಿ ‘ರಾಖಿ ಭಾಯ್’..!
ಬಹುದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಭರತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಡಿ.24 ರಾತ್ರಿ 11ಗಂಟೆಗೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. 45 ವರ್ಷದ ಭರತ್ , ರವಿಚಂದ್ರನ್ ಪುತ್ರ ಮನೋರಂಜನ್ ನಟನೆಯ ಸಾಹೇಬ ಚಿತ್ರಕ್ಕೂ ಆಕ್ಷನ್ ಕಟ್ ಹೇಳಿದ್ದರು. ಇನ್ನೂ ಕೆಂಗೇರಿಯ ಬಿಜೆಎಸ್ ಆಸ್ಪತ್ರೆಯ ಬಳಿ ಭರತ್ ಅವರ ಅಂತಿಮ ಸಂಸ್ಕಾರ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ವಿಪರ್ಯಾಸವೆಂದರೆ ಭರತ್ ಅವರು ತಮ್ಮ ಹೊಸ ಪ್ರಾಜೆಕ್ಟ್ ನ ತಯಾರಿಯಲ್ಲಿದ್ದರು. ಆದರೆ ಅಷ್ಟರಲ್ಲೇ ಕೊನೆಯುಸಿರೆಳೆದಿದ್ದಾರೆ. ಭರತ್ ಅವರು ಪತ್ನಿ ಹಾಗೂ ಮಗಳನ್ನ ಅಗಲಿದ್ದು, ಅವರ ಕುಟುಂಬದಲ್ಲಿ ನೀರವ ಮೌನ ಆವರಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








