ಸದನದಲ್ಲಿ ಶರ್ಟ್ ಬಿಚ್ಚಿದ ಶಾಸಕ ಸಂಗಮೇಶ್..!!!

1 min read
sangamesh

ಸದನದಲ್ಲಿ ಶರ್ಟ್ ಬಿಚ್ಚಿದ ಶಾಸಕ ಸಂಗಮೇಶ್..!!!

ಬೆಂಗಳೂರು : ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಸದನದಲ್ಲಿ ಕಾಂಗ್ರೆಸ ಶಾಸಕ ಸಂಗಮೇಶ್ ಅವರು ಶರ್ಟ್ ಬಿಚ್ಚಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇಂದು ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್ ಕಾಗೇರಿ, ಒಂದು ದೇಶ ಒಂದು ಚುನಾವಣೆ ಕುರಿತು ವಿಶೇಷ ಚರ್ಚೆ ಬಗ್ಗೆ ಪ್ರಸ್ತಾಪಿಸಿದ್ರು. ಈ ವೇಳೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ನಿಯಮಾವಳಿಗಳಲ್ಲಿ ಈ ಚರ್ಚೆ ಮಾಡುತ್ತೀದ್ದೀರಿ. ಇದೊಂದು ಆರ್ ಎಸ್ ಎಸ್ ಅಜೆಂಡಾ ಅಂತಾ ಒಂದು ದೇಶ ಒಂದು ಚುನಾವಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ರು.

sangamesh

ಈ ವೇಳೆ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಿದ ಕಾಂಗ್ರೆಸ್ ಸದಸ್ಯರು, ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ್ರು. ಪ್ರತಿಗಳನ್ನ ಹರಿದು ಸ್ಪೀಕರ್ ಮೇಲೆ ಚಲ್ಲಿದ್ರು. ಈ ಹಂತದಲ್ಲಿ ಕಾಂಗ್ರೆಸ್ ಶಾಸಕ ಸಂಗಮೇಶ್ ತಮ್ಮ ಶರ್ಟ್ ಬಿಚ್ಚಿ ಆಕ್ರೋಶ ಹೊರಹಾಕಿದ್ರು.

ಇದರಿಂದ ಕೆರಳಿದ ಸ್ಪೀಕರ್, ಸಂಗಮೇಶ್ ಅವರನ್ನ ಒಂದು ವಾರದ ಕಾಲ ಸದನದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಸಂಗಮೇಶ್, ನಾನು ಬೇಕು ಅಂತಾನೇ ಶರ್ಟ್ ಬಿಚ್ಚಿದ್ದು. ನನಗೆ ಈ ಬಗ್ಗೆ ವಿಷಾದ ವಿಲ್ಲ, ನನ್ನ ಮೇಲೆ ಸುಳ್ಳು ಕೇಸ್ ಹಾಕಿಸಿದ್ದಾರೆ. ಸ್ಪೀಕರ್ ಬಿಜೆಪಿ ಪರ, ನಾನು ಧರಣಿ ಮುಂದುವರಿಸುತ್ತೇನೆ. ಅಪ್ಪ ಮಕ್ಕಳು, ಈಶ್ವರಪ್ಪ ಭದ್ರಾವತಿಯನ್ನ ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ನಿಂತಿದ್ದಾರೆ ಎಂದು ಆರೋಪಿಸಿದರು.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd