ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಅಡ್ಡಿಪಡಿಸುತ್ತಿರುವ ಕನ್ನಡ ವಿರೋಧಿ ಸಂಘಟನೆಗಳ ವಿರುದ್ಧ ನಟ, ಯುವ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ತೀವ್ರವಾಗಿ ಆಕ್ರೋಶ ಹೊರಹಾಕಿದ್ದಾರೆ. ಇತ್ತೀಚೆಗೆ ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಟಾಪನೆಗೆ MES ಸಂಘಟನೆ ವಿರೋಧ ವ್ಯಕ್ತಿಪಡಿಸಿ, ಕನ್ನಡ ಸಂಘಟನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆದಿದ್ದರು. ಅಲ್ಲದೇ ಪೊಲೀಸರು ಸಹ ಲಾಠಿ ಚಾರ್ಜ್ ನಡೆಸಿದ್ದರು.
ಈ ವಿಚಾರ ಕನ್ನಡಾಭಿಮಾನಿಗಳ ಕೆರಳಿಸಿದ್ದು , ಕನ್ನಡಿಗರ ಆಕ್ರೋಶ ಕಾರಣವಾಗಿದೆ. ಈ ವಿಚಾರವಾಗಿ ಟ್ವೀಟ್ ನಿಖಿಲ್ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದು, ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕರ್ನಾಟಕದ ಅಸ್ಮಿತೆ. ಅಂತಹವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ನಾಡದ್ರೋಹದ ಕೆಲಸ. ನಮ್ಮದೇ ನೆಲದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡಲು ಕನ್ನಡಿಗರು ಇಷ್ಟು ಹರಸಾಹಸ ಪಡಬೇಕೇ?’ ಎಂದು ಪ್ರಶ್ನೆ ಮಾಡಿದ್ದಾರೆ.
ಅಲ್ಲದೇ ‘ಕನ್ನಡಿಗರ ಸ್ವಾಭಿಮಾನ ಹಾಗೂ ಸಹನೆಯನ್ನು ಕೆಣಕಿದಂತೆಯೇ’ ನಮ್ಮದೇ ನಾಡಿನಲ್ಲಿ ನಮ್ಮ ನೆಲದ ಕ್ರಾಂತಿವೀರರ ಪ್ರತಿಮೆ ಸ್ಥಾಪನೆಗೆ ವಿರೋಧ ಮಾಡುವುದು ಕನ್ನಡಿಗರ ಸ್ವಾಭಿಮಾನ ಹಾಗೂ ಸಹನೆಯನ್ನು ಕೆಣಕಿದಂತೆಯೇ. ಈ ಬಗ್ಗೆ ಮುಖ್ಯಮಂತ್ರಿಗಳು ವಿಶೇಷ ಗಮನಹರಿಸಬೇಕು. ಜೊತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.