sanjana galrani open up about her secret marriage
ಕಳೆದ ಲಾಕ್‍ಡೌನ್‍ನಲ್ಲಿ ನನ್ನ ಮದುವೆಯಾಯ್ತು: ಸಂಜನಾ ಗಲ್ರಾಣಿ
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ನಲ್ಲಿ ಸಿಲುಕಿ ತುಪ್ಪದ ಬೆಡಗಿ ರಾಗಿಣಿ ಜೊತೆಗೆ ಪರಪ್ಪನ ಅಗ್ರಹಾರದಲ್ಲಿ ತಿಂಗಳುಗಟ್ಟಲೆ ಸಂಜನಾ ಗಲ್ರಾನಿ ಸೆರೆವಾಸ ಅನುಭವಿಸಿದ್ದರು.. ವಿಚಾರಣೆ ವೇಳೆ ಸಂಜನಾ ಗಲ್ರಾನಿ ಸೀಕ್ರೆಟ್ ಆಗಿ ಮದುವೆಯಾಗಿದ್ದೂ ಅಲ್ಲದೇ ಮತಾಂತರಗೊಂಡಿದ್ದ ವಿಚಾರವೂ ಬಹಿರಂಗವಾಗಿತ್ತು.. ಇದೀಗ ಸಂಜನಾ ಜಾಮೀನಿನ ಮೇಲೆ ಹೊರಬಂದಿದ್ದು, ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ಜೊತೆಗೆ ಲಾಕ್ ಡೌನ್ ಸಂದರ್ಭದಲ್ಲಿ ಬಡವರಿಗೆ ದಿನಸಿ ವಿತರಣೆ ಸೇರಿ ಇತರೇ ಕಾರ್ಯಗಳನ್ನ ಮಾಡುತ್ತಾ ಸುದ್ದಿಯಲ್ಲಿದ್ದಾರೆ.. ಇದೀಗ ಸಂಜನಾ ಗಲ್ರಾನಿ ಮದುವೆ ವಿಚಾರವಾಗಿ ಮಾತನಾಡಿದ್ದಾರೆ.
ತಾನು ಮದುವೆಯಾಗಿದ್ದೇನೆ ಎಂಬ ಸತ್ಯ ಬಾಯ್ಬಿಟ್ಟಿದ್ದಾರೆ. ಕಳೆದ ಲಾಕ್ ಡೌನ್ ನಲ್ಲಿ ನನ್ನ ಮದುವೆಯಾಯ್ತು. ನಾನಾ ಕಾರಣಗಳಿಂದ ಮದುವೆ ಸಂಭ್ರಮವನ್ನ ನಿಮ್ಮೆಲ್ಲರ ಜೊತೆ ಹಂಚಿಕೊಳ್ಳೋಕೆ ಆಗಲಿಲ್ಲ. ದೊಡ್ಡದಾಗಿ ಸೆಲೆಬ್ರೇಷನ್ ಮಾಡಬೇಕು ಅನ್ಕೊಂಡಿದ್ದೆ ಎಂದರು.
ಚಿತ್ರರಂಗದ ಅಣ್ಣ-ತಮ್ಮಂದಿರಿಗೆ ಊಟ ಹಾಕಿಸೋಕೆ ಆಗಲಿಲ್ಲ ಅನ್ನೋ ಕೊರಗಿದೆ. ಆದರೆ ಪ್ಯಾಂಡಮಿಕ್ ಕಾಲದಲ್ಲಿ ಕುಟುಂಬದ ಜೊತೆ ಚರ್ಚಿಸಿ ಕೈಲಾದ ಸಹಾಯ ಮಾಡೋಕೆ ನಿರ್ಧರಿಸಿದ್ದೇವೆ. ಸಂಜನಾ ಗಲ್ರಾಣಿ ಫೌಂಡೇಷನ್ ವತಿಯಿಂದ ಕೈಲಾದ ಸಹಾಯ ಮಾಡ್ತಿದ್ದೀವಿ. ಎಲ್ಲರಿಗೂ ಕಿಟ್ ಕೊಡಲು ಆಗಲಿಲ್ಲ. ಭಗವಂತ ಶಕ್ತಿ ಕೊಟ್ರೆ ಕನ್ನಡ ಇಂಡಸ್ಟ್ರಿಯೇ ನನ್ನ ಮೊದಲ ಆದ್ಯತೆ ಎಂದು ತಿಳಿಸಿದರು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








