ಬೆಂಗಳೂರು: ಸ್ಯಾಂಡಲ್ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪಡಿ ಬಂಧನಕ್ಕೊಳಗಾಗಿರುವ ನಟಿ ಸಂಜನಾಳನ್ನು ಮತ್ತೆ ಮೂರುದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಡ್ರಗ್ಸ್ ಲಿಂಕ್ ಪ್ರಕರಣದಲ್ಲಿ ನಟಿ ರಾಗಿಣಿ ಸೇರಿ ಐವರು ಪೆಡ್ಲರ್ಗಳು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗಿದ್ದರೆ, ನಟಿ ಸಂಜನಾರನ್ನು ಮತ್ತೆ 3 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ನಟಿ ಸಂಜನಾ ಇದುವರೆಗೂ ವಿಚಾರಣೆಗೆ ಸರಿಯಾಗಿ ಸಹಕರಿಸಿದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಮತ್ತೆ ಕಸ್ಟಡಿಗೆ ಕೇಳಿದ್ದರು. ಅವರ ಮನವಿಯನ್ನು ಸ್ವೀಕರಿಸಿರುವ ನ್ಯಾಯಾಲಯವು ಸಂಜನಾ ಹಾಗೂ ವೀರೇನ್ ಖನ್ನಾ ಮತ್ತು ರವಿಶಂಕರ್ನನ್ನೂ ಸಿಸಿಬಿ ವಶಕ್ಕೆ ನೀಡಿದೆ.
ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ, ಸಂಜನಾ ಸೇರಿ 6 ಆರೋಪಿಗಳ ಸಿಸಿಬಿ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಹಾಜರು ಪಡಿಸಲಾಗಿತ್ತು. ನಟಿ ರಾಗಿಣಿ ದ್ವಿವೇದಿ ಸೇರಿ 5 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.