ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಸಂಜೀವಿನಿ ಪರ್ವತ ಉಲ್ಲೇಖಿಸಿ ಭಾರತಕ್ಕೆ ಪತ್ರ ಬರೆದ ಬ್ರೆಜಿಲ್ ಅಧ್ಯಕ್ಷ…

admin by admin
April 9, 2020
in International, Newsbeat
Share on FacebookShare on TwitterShare on WhatsappShare on Telegram

ಕೊರೊನಾ ವೈರಸ್‍ ಸೋಂಕಿನಿಂದ ತತ್ತರಿಸಿರುವ ಅಮೆರಿಕ ಸೇರಿದಂತೆ ವಿವಿಧ ದೇಶಗಳು, ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಪ್ಯಾರೆಸಿಟಮಾಲ್ ರಫ್ತು ಮಾಡಲು ಭಾರತಕ್ಕೆ ಮನವಿ ಸಲ್ಲಿಸಿದ್ದು, ಔಷಧಿ ರಫ್ತಿಗೆ ಭಾರತ ಸರ್ಕಾರ ಮುಂದಾಗಿದೆ.

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧಿ ರಫ್ತಿಗೆ ಮುಂದಾದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರದ ನಿರ್ಧಾರವನ್ನು ರಾಮಾಯಣದಲ್ಲಿ ಬರುವ ಸಂಜೀವಿನಿ ಪರ್ವತಕ್ಕೆ ಹೋಲಿಕೆ ಮಾಡಿದ್ದಾರೆ.
ರಾಮಾಯಣದ ಪೌರಾಣಿಕ ಕಥೆಯಲ್ಲಿ ಲಂಕೆಯಲ್ಲಿ ನಡೆದ ಯುದ್ಧದಲ್ಲಿ ಗಾಯಗೊಂಡಿದ್ದ ಶ್ರೀರಾಮನ ಸಹೋದರ ಲಕ್ಷಣ ಮೂರ್ಛೆ ತಪ್ಪಲು, ವಾನರ ಸೈನದ ವೈದ್ಯರು ಚಿಕಿತ್ಸೆ ನೀಡಲು ಸಂಜೀವಿನಿ ಗಿಡಮೂಲಿಕೆ ಬೇಕೆಂದು ಹೇಳುತ್ತಾರೆ. ‌ಆಗ ರಾಮನ ಪರಮಭಕ್ತ ಹನುಮಂತ ಸಂಜೀವಿನಿ ಪರ್ವತವನ್ನೇ ಹೊತ್ತುಕೊಂಡು ಬರುತ್ತಾನೆ. ಈ ಪ್ರಸಂಗವನ್ನು ನೆನೆದು, ಔಷಧಿ ರಫ್ತಿಗೆ ಭಾರತ ನೀಡಿರುವ ಅನುಮತಿಯ ಹಿನ್ನೆಲೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ಪತ್ರವನ್ನು ಬರೆದಿದ್ದು, ಭಗವಾನ್ ರಾಮನ ಸಹೋದರ ಲಕ್ಷ್ಮಣನ ಜೀವವನ್ನು ಉಳಿಸಲು ಹನುಮಂತ ಹಿಮಾಲಯದಿಂದ ಸಂಜೀವಿನಿ ತಂದ. ಯೇಸು ಅನಾರೋಗ್ಯದಿಂದ ಬಳಲುತ್ತಿದ್ದವರನ್ನು ಗುಣಪಡಿಸಿದ ಹಾಗೂ ಬಾರ್ಟಿಮಿಯುಗೆ ಕಣ್ಣು ಕಾಣುವಂತೆ ಮಾಡಿದ. ಜಗತ್ತಿನ ಎಲ್ಲಾ ಜನರ ಸಲುವಾಗಿ ಭಾರತ ಮತ್ತು ಬ್ರೆಜಿಲ್ ಈ ಜಾಗತಿಕ ಬಿಕ್ಕಟ್ಟನ್ನು ನಿವಾರಿಸಲು ಶ್ರಮಿಸುತ್ತಿವೆ ಎಂದು ತಿಳಿಸಿದ್ದಾರೆ.
ಭಾರತ ಔಷಧಿ ರಫ್ತಿಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ನಾನು ಲಕ್ಷಾಂತರ ರೂ. ಮೌಲ್ಯದ ಪ್ರಮಾಣದಲ್ಲಿ ಔಷಧಿ ಖರೀದಿಸಿದೆ. ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿದ್ದೇನೆ. ಆದಷ್ಟು ಬೇಗ ಭಾರತದಿಂದ ರಫ್ತು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಅವರು ಗ್ರೇಟ್, ನಿಜವಾಗಿಯೂ ಒಳ್ಳೆಯವರು. ಔಷಧಿ ಭಾರತಕ್ಕೆ ಬೇಕಾಗಿರುವುದರಿಂದಲೇ ರಫ್ತಿನ ಮೇಲೆ ನಿರ್ಬಂಧ ಹೇರಿದ್ದರು. ಆದರೆ ಈಗ ಅವರಿಂದ ಸಾಕಷ್ಟು ಒಳ್ಳೆಯ ಸಂಗತಿಗಳು ಬರುತ್ತಿವೆ ಎಂದು ಪ್ರಧಾನಿ ಮೋದಿ ಅವರನ್ನು ಹೊಗಳಿದ್ದಾರೆ. ಬಹಳಷ್ಟು ಜನರು ಭಾರತದ ಸಹಾಯವನ್ನು ನೋಡುತ್ತಿದ್ದಾರೆ, ಅದರ ಬಗ್ಗೆ ಮಾತನಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಾನು ಕೆಟ್ಟ ವಿಷಯಗಳನ್ನು ಕೇಳುವುದಿಲ್ಲ. ಭಾರತಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ.
ಅಮೆರಿಕದಲ್ಲಿ 4 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 15 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 26 ಜೆನರಿಕ್ ಔಷಧಿಗಳ ರಫ್ತಿಗೆ ಕಳೆದ ತಿಂಗಳಷ್ಟೇ ಭಾರತ ನಿರ್ಬಂಧ ಹೇರಿತ್ತು. ಕೊರೋನಾ ಸೋಂಕಿನಿಂದ ಕಂಗಾಲಾಗಿರುವ ಅಮೆರಿಕದಲ್ಲಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಆ್ಯಂಟಿ ಮಲೇರಿಯಾ ಔಷಧಿಯನ್ನು ತ್ವರಿತವಾಗಿ ರಫ್ತು ಮಾಡುವಂತೆ ಅಮೆರಿಕ ಕೇಳಿತ್ತು. ಮಾನವೀಯತೆಯ ದೃಷ್ಟಿಯಿಂದ ಕೊರೋನಾ ಸೋಂಕಿನಿಂದ ಕಂಗಾಲಾಗಿರುವ ರಾಷ್ಟ್ರಗಳಿಗೆ ಆ್ಯಂಟಿ ಮಲೇರಿಯಾ (ಹೈಡ್ರೋಕ್ಸಿಕ್ಲೋರೋಕ್ವೀನ್) ಔಷಧಿ ರಫ್ತು ಮಾಡುವುದಾಗಿ ಭಾರತ ತಿಳಿಸಿದೆ.
ಕೊರೊನಾಗೆ ಇಲ್ಲಿಯವರೆಗೆ ಯಾವುದೇ ಔಷಧಿ ಕಂಡು ಹಿಡಿದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯೇ ಯಾವುದೇ ಔಷಧಿಯಿಂದ ಕೊರೊನಾ ವಾಸಿಯಾಗಿದ್ದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಹೇಳಿದೆ.
ಆದರೆ ತಾತ್ಕಾಲಿಕವಾಗಿ ಕೊರೊನಾಗೆ ಯಾವ ಮಾತ್ರೆ ನೀಡಿದರೆ ಕಡಿಮೆಯಾಗುತ್ತದೆ ಎನ್ನುವ ಬಗ್ಗೆ ಕಂಪನಿಯೊಂದು ಅಧ್ಯಯನ ನಡೆಸಿದ್ದು, ಹಲವು ದೇಶಗಳಲ್ಲಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯಿಂದ ರೋಗಿಗಳು ಗುಣಮುಖರಾಗಿದ್ದಾರೆ ಎಂದು ತಿಳಿಸಿದೆ. ಕೊರೊನಾ ತೀವ್ರವಾಗಿ ಹರಡುತ್ತಿರುವ ಯುರೋಪ್, ದಕ್ಷಿಣ ಅಮೆರಿಕ, ಆಸ್ಟ್ರೇಲಿಯಾ ಸೇರಿದಂತೆ ವಿಶ್ವದ 30 ದೇಶಗಳ ಒಟ್ಟು 6,227 ಮಂದಿ ವೈದ್ಯರನ್ನು ಸಂಪರ್ಕಿಸಿ ಅಧ್ಯಯನ ನಡೆಸಲಾಗಿದ್ದು, ಈ ಪೈಕಿ ಶೇ.37ರಷ್ಟು ಮಂದಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರ ಪರಿಣಾಮ ಬೀರಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗೆ ಬೇಡಿಕೆ ಹೆಚ್ಚಾಗಿದೆ. ಭಾರತದಲ್ಲಿ ಮಲೇರಿಯಾ ರೋಗದ ವಿರುದ್ಧ ಹೋರಾಡಲು ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯನ್ನು ನೀಡಲಾಗುತ್ತಿದೆ. ಭಾರತದಲ್ಲಿ ಇದು ಯಶಸ್ವಿಯಾದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಈ ಮಾತ್ರೆಗಳನ್ನು ದೇಶದಲ್ಲಿ ಉತ್ಪಾದನೆ ಮಾಡಲಾಗುತ್ತಿದೆ.

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026
Tags: Brazil
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram