Santhosh Patil Case | ಸಂಜೆ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಸಾಧ್ಯತೆ
ಬೆಂಗಳೂರು : ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಹೀಗಾಗಿ ಅವರು ಸಂಜೆ ವೇಳೆಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಹೆಸರು ಹೇಳಿಬಂದಿದ್ದು, ಎಫ್ ಐಆರ್ ನಲ್ಲಿ ಮೊದಲ ಆರೋಪಿಯಾಗಿದ್ದಾರೆ. ಹೀಗಾಗಿ ಈಶ್ವರಪ್ಪ ವಿರುದ್ಧ ಬಿಜೆಪಿ ಹೈಕಮಾಂಡ್ ಫುಲ್ ಗರಂ ಆಗಿದೆ.
ಕಳೆದ ರಾತ್ರಿ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅಮಿತ್ ಶಾ ಜೊತೆ ಮಾತುಕತೆ ನಡೆಸಿದ್ದಾರೆ.
ಸಂತೋಷ್ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಸರ್ಕಾರ ಮತ್ತು ಪಕ್ಷದ ಮೇಲೆ ಬೀರುವ ಪರಿಣಾಮದ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆ.
ಅಲ್ಲದೇ ಇಂದು ಬೆಳಿಗ್ಗೆ ಕೂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜೊತೆಗೆ ಕೂಡ ಹೈಕಮಾಂಡ್ ನಾಯಕರು ಮಾತುಕತೆ ನಡೆಸಿದ್ದಾರೆ.
ಇದೀಗ ಬಿಜೆಪಿ ಹೈಕಮಾಂಡ್ ಕೆ.ಎಸ್.ಈಶ್ವರಪ್ಪ ವಿರುದ್ಧ ಗರಂ ಆಗಿದೆ ಎಂದು ತಿಳಿದುಬಂದಿದ್ದು, ರಾಜೀನಾಮೆಗೆ ಸೂಚನೆ ನೀಡಿದೆ ಎಂದು ವರದಿಯಾಗಿದೆ.
ಮೂಲಗಳ ಪ್ರಕಾರ ಇಂದು ಸಂಜೆ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡುವ ಸಾಧ್ಯತೆ ಇದೆ. santhosh-patil-case-Chances of resignation of KS Eshwarappa









