Santosh patil death case | “ಬಿಜೆಪಿ ಕರಪ್ಷನ್ ಫೈಲ್ಸ್”
ಬೆಂಗಳೂರು : ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಘಟಕ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರಿದೆ.
ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಪ್ರಸ್ತಾಪಿಸಿ ರಾಷ್ಟ್ರಮಟ್ಟದಲ್ಲಿ ಹೋರಾಟಕ್ಕೆ ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ.
ಕಮಿಷನ್ ಆರೋಪ, ಗುತ್ತಿಗೆದಾರರ ಸಾವು ಇಟ್ಟುಕೊಂಡು, ರಾಷ್ಟ್ರಮಟ್ಟದಲ್ಲಿ ಕೇಸರಿ ಪಡೆಗೆ ಟಕ್ಕರ್ ಕೊಡಲು ಕೈ ಕಲಿಗಳು ಮುಂದಾಗುತ್ತಿದ್ದಾರೆ.
ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ.
ಇಂದು ದೆಹಲಿಯಲ್ಲಿ ಯೂಥ್ ಕಾಂಗ್ರೆಸ್, ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ, ಗೃಹ ಸಚಿವ ಅಮಿತ್ ನಿವಾಸದ ಮುಂದೆ ಪ್ರತಿಭಟನೆಗೆ ನಿರ್ಧರಿಸಿದೆ.
ಇತ್ತ ರಾಜ್ಯದಲ್ಲೂ ಯೂಥ್ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಟ್ವಿಟ್ಟರ್ ನಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ಬಿಜೆಪಿ ಕರಪ್ಷನ್ ಫೈಲ್ಸ್ ಎಂದು ಆಕ್ರೋಶ ಹೊರಹಾಕಿದ್ದಾರೆ.









