Santosh Patil Death Case | ಕೆ. ಎಸ್. ಈಶ್ವರಪ್ಪ ಸಚಿವ ಸ್ಥಾನ ಕಳೆದುಕೊಳ್ಳಬಹುದಾ?
ಬೆಂಗಳೂರು : ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂರೆ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಈ ಪ್ರಕರಣದಲ್ಲಿ ಕೆ.ಎಸ್.ಈಶ್ವರಪ್ಪ ಮೊದಲ ಆರೋಪಿಯಾಗಿದ್ದಾರೆ. ಹೀಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ. ಎಸ್. ಈಶ್ವರಪ್ಪ ಸಚಿವ ಸ್ಥಾನ ಕಳೆದುಕೊಳ್ಳಬಹುದಾ? ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಶುರುವಾಗಿದೆ.
ಯಾಕಂದರೇ ಈ ಹಿಂದೆ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವಿದ್ದಾಗ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲೂ ಅಂದಿನ ಗೃಹ ಸಚಿವ ಕೆ. ಜೆ. ಜಾರ್ಜ್ ಅವರ ತಲೆದಂಡವಾಗಿತ್ತು.
ಅಂದು ಜಾರ್ಜ್ ವಿರುದ್ದ ಹೋರಾಟ ಮಾಡಿದ್ದ ಬಿಜೆಪಿ, ಅವರ ರಾಜೀನಾಮೆ ಪಡೆಯುವಲ್ಲಿ ಯಶಸ್ವಿಯಾಗಿತ್ತು.
ಇದೀಗ ಕಾಂಗ್ರೆಸ್ ಕೂಡಾ ಬಿಜೆಪಿ ವಿರುದ್ಧ ಸಚಿವ ಈಶ್ವರಪ್ಪ ಹೋರಾಟಕ್ಕೆ ಪ್ಲಾನ್ ಮಾಡಿಕೊಂಡಿದೆ.
ಈ ವಿಚಾರವನ್ನೇ ಅಸ್ತ್ರವಾಗಿಸಿಕೊಂಡು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತಯಾರಿ ನಡಸಿದೆ.
ಹೀಗಾಗಿ ಬಿಜೆಪಿ ಹೈಕಮಾಂಡ್ ಸಚಿವರ ರಾಜೀನಾಮೆ ಪಡೆದು ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಬಹುದು ಅಂತಾ ಅಂದಾಜಿಸಲಾಗುತ್ತಿದೆ.
ಪ್ರಕರಣ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಪ್ರಕರಣದಲ್ಲಿ ಎ-1 ಆರೋಪಿ ಸಚಿವ ಕೆ.ಎಸ್ ಈಶ್ವರಪ್ಪ, ಎ-2 ಈಶ್ವರಪ್ಪ ಆಪ್ತ ಬಸವರಾಜ್, ಎ-2 ಈಶ್ವರಪ್ಪ ಆಪ್ತ ರಮೇಶ್ ಆಗಿದ್ದು, ಇವರುಗಳ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ರಡಿ ಎಫ್‍ಐಆರ್ ದಾಖಲು ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
santosh-patil-death-case-eshwarappa-may-resign-after-fir-against-him









