ಸಪ್ನಾ ಬುಕ್‌ ಹೌಸ್ ಸಂಸ್ಥಾಪಕ ಸುರೇಶ್ ಶಾ ವಿಧವಶ

1 min read

ಸಪ್ನಾ ಬುಕ್‌ ಹೌಸ್ ಸಂಸ್ಥಾಪಕ ಸುರೇಶ್ ಶಾ ವಿಧವಶ

ಬೆಂಗಳೂರು: ಪ್ರಖ್ಯಾತ ಸಪ್ನಾ ಬುಕ್  ಹೌಸ್ ನ ಸಂಸ್ಥಾಪಕರಾದ ಸುರೇಶ್ ಸಿ. ಶಾ ಅವರು ವಿಧಿವಶರಾಗಿದ್ದಾರೆ. 84 ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದಾಗಿ ನಿಧನಹೊಂದಿದ್ದಾರೆ. ಸುಮಾರು ದಿನಗಳಿಂದ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದ  ಸುರೇಶ್ ಶಾ ಅವರು ಶೇಷಾದ್ರಿಪುರದ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ. ಬುಧವಾರ ಬೆಳಿಗ್ಗೆ ಹರಿಶ್ಚಂದ್ರ ಘಾಟ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ. ಅಂದ್ಹಾಗೆ ಸುರೇಶ್ ಶಾ ಅವರು 1966ರಲ್ಲಿ ಸಪ್ನಾ ಬುಕ್ ಹೌಸ್ ಆರಂಭಿಸಿದ್ದರು.

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd