ತುಮಕೂರು: ಪೊಲೀಸ್ ಠಾಣೆಯಿಂದ ಸರಗಳ್ಳ ಪರಾರಿಯಾಗಿರುವ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಹಾಗೂ ನಾಲ್ವರು ಸಿಬ್ಬಂದಿ ಅಮಾನತು ಮಾಡಲಾಗಿದೆ.
ಈ ಘಟನೆ ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆ(Gubbi police station)ಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆ ಪಿಎಸ್‌ಐ ದೇವಿಕಾ ಸೇರಿದಂತೆ ನಾಲ್ವರನ್ನು ಅಮಾನತು ಮಾಡಿ ಎಸ್ಪಿ ಅಶೋಕ್ ಕೆ.ವಿ ಆದೇಶ ಹೊರಡಿಸಿದ್ದಾರೆ.
ಪೊಲೀಸ್ ಠಾಣೆಯಿಂದಲೇ ಸರಗಳ್ಳ ಸೈಯದ್ ಅಲಿ ಎಂಬಾತ ಎಸ್ಕೇಪ್ ಆಗಿದ್ದ. ಈ ಹಿನ್ನಲೆಯಲ್ಲಿ ಕರ್ತವ್ಯಲೋಪದಡಿ ಅಮಾನತು ಆದೇಶ ಹೊರಡಿಸಲಾಗಿದೆ. ಆರೋಪಿ ಸೈಯದ್ ಅಲಿ ನಾಪತ್ತೆಯಾಗಿದ್ದು, ಆತನಿಗಾಗಿ ಮೂರು ತಂಡ ರಚಿಸಲಾಗಿದೆ.