ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ – 10 ಲಕ್ಷ ಸರ್ಕಾರಿ ನೌಕರರ ನೇಮಕಕ್ಕೆ ಮೋದಿ ಸೂಚನೆ…
ಸರ್ಕಾರಿ ಉದ್ಯೋಗಕ್ಕೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನ ನೀಡಿದೆ. ಮುಂಬರುವ 1.5 ವರ್ಷಗಳಲ್ಲಿ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಹತ್ತು ಲಕ್ಷ ಹುದ್ದೆಗಳಿಗೆ ನೇಮಕಾತಿ ಮಾಡಲಿದೆ. ಈ ನೇಮಕಾತಿಯನ್ನು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳ ಅಡಿಯಲ್ಲಿ ನಡೆಸಲಾಗುವುದು.
ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ನೌಕರರ ಸ್ಥಿತಿಗತಿಗಳನ್ನು ಪರಿಶೀಲಿಸಿದ ನಂತರ ಈ ಉದ್ಯೋಗಗಳನ್ನು ನೀಡಲು ಪ್ರಧಾನಿ ನರೇಂದ್ರ ಮೋದಿ ಆದೇಶ ನೀಡಿದ್ದಾರೆ.
ಪಿಎಂಒ ಟ್ವೀಟ್
ಸರ್ಕಾರದ ಈ ಕಾರ್ಯವನ್ನ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ ಮತ್ತು ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರನ್ನು ಮಿಷನ್ ಮೋಡ್‌ನಲ್ಲಿ ಭಾಗವಾಗಿ ನೇಮಿಸಿಕೊಳ್ಳಬೇಕೆಂದು ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ ಎಂದು ಹೇಳಲಾಗಿದೆ.
ಏಪ್ರಿಲ್ ನಲ್ಲಿ ಅಧಿಕಾರಿಗಳೊಂದಿಗೆ ಮೊದಿ ಭೇಟಿ
ಮಾಧ್ಯಮ ವರದಿಗಳ ಪ್ರಕಾರ, ಪ್ರಧಾನಿ ಮೋದಿ ಅವರು ಕಳೆದ ಏಪ್ರಿಲ್‌ನಲ್ಲಿ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಸರಕಾರದ ನಾನಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಇದರಿಂದ ದೇಶದಲ್ಲಿ ಯುವಕರಿಗೆ ಉದ್ಯೋಗದ ಅವಕಾಶಗಳನ್ನು ಸೃಷ್ಟಿಸಬಹುದು.
ಧನ್ಯವಾದ ತಿಳಿಸಿದ ಗೃಹ ಸಚಿವ ಅಮಿತ್ ಶಾ
ಪ್ರಧಾನಿ ನರೇಂದ್ರ ಮೋದಿಯವರ ಈ ಕ್ರಮಕ್ಕೆ ಗೃಹ ಸಚಿವ ಅಮಿತ್ ಶಾ ಧನ್ಯವಾದ ತಿಳಿಸಿದ್ದಾರೆ. ಅವರು ಬರೆದಿದ್ದಾರೆ – ನವ ಭಾರತದ ಆಧಾರವು ಅದರ ಯುವ ಶಕ್ತಿಯಾಗಿದೆ, ಅದನ್ನು ಸಶಕ್ತಗೊಳಿಸಲು ಮೋದಿ ಜಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. 1.5 ವರ್ಷಗಳಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ 10 ಲಕ್ಷ ಜನರನ್ನು ಮಿಷನ್ ಮೋಡ್‌ನಲ್ಲಿ ನೇಮಕ ಮಾಡಿಕೊಳ್ಳುವ ಮೋದಿಯವರ ನಿರ್ದೇಶನವು ಯುವಜನರಲ್ಲಿ ಹೊಸ ಭರವಸೆ ಮತ್ತು ಆತ್ಮವಿಶ್ವಾಸವನ್ನು ತರುತ್ತದೆ. ಇದಕ್ಕಾಗಿ ನಾನು ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.