ಮೈಸೂರು: ಸರೋದ್ ವಾದಕ ಪಂ. ರಾಜೀವ್ ತಾರಾನಾಥ್ ಇಹಲೋಕ ತ್ಯಜಿಸಿದ್ದಾರೆ.
91 ವರ್ಷದ ರಾಜೀವ್ ತಾರಾನಾಥ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರು ಕಳೆದ ಹಲವು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ದೇಶ – ವಿದೇಶಗಳಲ್ಲಿಯೂ ರಾಜೀವ್ ತಾರಾನಾಥ್ ಕಾರ್ಯಕ್ರಮಗಳನ್ನು ನೀಡಿ ಹೆಸರು ಮಾಡಿದ್ದರು. ಅವರನ್ನು ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮೇರು ಕಲಾವಿದ ಎಂದು ಕರೆಯಲಾಗುತ್ತಿತ್ತು. ಸಂಗೀತ ಸೇವೆಗಾಗಿ ಇವರು ಪದ್ಮಶ್ರೀ, ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದರು. ರಾಜೀವ್ ತಾರಾನಾಥ್ ಅವರ ಅಂತಿಮ ದರ್ಶನಕ್ಕೆ ಮೈಸೂರಿನಲ್ಲಿ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಅಂತಿಮ ಕ್ರಿಯೆ ನಡೆಯಲಿದೆ.