ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸಿಂಥೆಲ್ ಕಾಂಗ್ರೆಸ್ ಸೇರ್ಪಡೆ
ಚೆನ್ನೈ : ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸಿಂಥೆಲ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಚೆನ್ನೈನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ತಮಿಳುನಾಡಿನ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಸಸಿಕಾಂತ್ ಸಿಂಥೆಲ್ ಅವರು ಕಾಂಗ್ರೆಸ್ ಪಕ್ಷ ಬಾವುಟ ಹಿಡಿದಿದ್ದಾರೆ.
2009ರ ಕರ್ನಾಟಕ-ಕೇಡರ್ ಐಎಎಸ್ ಅಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಹೊಡೆಯೋಕೆ ಬಂದಾಗ ನಾನು ತೋಳು ತಟ್ಟಿದ್ದು ನಿಜ : ಭೀಮಾನಾಯ್ಕ್
ಕಳೆದ ವರ್ಷದ ಸೆಪ್ಟೆಂಬರ್ 6ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ತಮಿಳುನಾಡು ಮೂಲದವರಾದ 41 ವರ್ಷದ ಸಸಿಕಾಂತ್ ಸೆಂಥಿಲ್ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದಾಗಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
ರಾಜೀನಾಮೇ ಬಳಿಕ ಸಿಂಥೆಲ್ ಅವರು ಎನ್ ಆರ್ ಸಿ ಮತ್ತು ಸಿಎಎ ವಿರೋಧಿ ಪ್ರತಿಭಟನೆಗಳಲ್ಲಿ ಭಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಅಲ್ಲದೇ ವಿಚಾರ ಸಂಕೀರಣ, ಸಮಾರಂಭಗಳಲ್ಲಿ ಸಸಿಕಾಂತ್ ಸಿಂಥೆಲ್ ಭಾಗವಹಿಸಿದ್ದರು.
ಐಎಎಸ್ ಅಧಿಕಾರಿಯಾಗಿದ್ದುಕೊಂಡು ಸರ್ಕಾರದ ನಡೆಗಳ ವಿರುದ್ಧ ಹೋರಾಡಲು ಸಾಧ್ಯವಿಲ್ಲ ಎಂಬ ಕಾರಣದಿಂದಾಗಿ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದ ಸಸಿಕಾಂತ್ ಸೆಂಥಿಲ್ ‘ಹೋರಾಟವನ್ನು ಮುಂದುವರೆಸುವ ದೃಷ್ಟಿಯಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದೇನೆ’ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ನೀರಿನ ದರ ಏರಿಕೆ : ರಾಜ್ಯ ಸರ್ಕಾರದ ವಿರುದ್ಧ ಸುರ್ಜೇವಾಲಾ ಕಿಡಿ
ಇನ್ನು ಮುಂದಿನ ವರ್ಷ ತಮಿಳುನಾಡಿನಲ್ಲಿ ವಿಧಾನಸಭಾ ಚನಾವಣೆ ನಡೆಯಲಿದ್ದು, ಸಸಿಕಾಂತ್ ಸಿಂಥೆಲ್ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel