ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರ್ಪಡೆ
ಚೆನ್ನೈ : ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜಕೀಯ ಪ್ರವೇಶ ಮಾಡಿದ ಬಳಿಕ ಇದೀಗ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಕೂಡಾ ರಾಜಕೀಯ ಪ್ರವೇಶ ಮಾಡಲಿದ್ದಾರೆ.
ಈ ಬಗ್ಗೆ ಹಿಂದೂಸ್ಥಾಬ್ ಟೈನ್ಸ್ ವರದಿ ಮಾಡಿದ್ದು, ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದಿದೆ.
ಸಸಿಕಾಂತ್ ಸೆಂಥಿಲ್ ಅವರು ನಾಳೆ ನವದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಯಾರು ಏನೇ ಟೀಕೆ ಮಾಡಿದ್ರೂ ಜನ ನಮ್ಮ ಪರ : ಬಿಎಸ್ ವೈ
ನಾಗರಿಕ ಸೇವಾ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಸಸಿಕಾಂತ್ ಸೆಂಥಿಲ್ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ್ದರು.
ಪೌರತ್ವ (ತಿದ್ದುಪಡಿ) ಕಾಯ್ದೆಯ ಕುರಿತು ನರೇಂದ್ರ ಮೋದಿ ಸರ್ಕಾರದ ನಡೆಯ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಪ್ರಚಾರ ಮಾಡಿದ್ದರು.
ಸಿ.ಟಿ ರವಿ ರಾಜೀನಾಮೆ ಅಂಗೀಕಾರ; ವರಿಷ್ಠರ ಭೇಟಿಗೆ ದಿಲ್ಲಿಗೆ ದೌಡು..!
ಇನ್ನು ಕಳೆದ ಆಗಸ್ಟ್ ನಲ್ಲಿ ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಅವರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel