ಸತೀಶ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಅಭ್ಯರ್ಥಿ : ಸಿದ್ದರಾಮಯ್ಯ ಹೇಳಿದ್ದೇನು..?
ಹಾಸನ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.
ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅರಸೀಕೆರೆಯಲ್ಲಿ ಪ್ರತಿಕ್ರಿಯಿಸಿ, ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅಭ್ಯರ್ಥಿಯಾಗುವ ವಿಚಾರ ಚರ್ಚೆಯಲ್ಲಿದೆ.
ಅಭ್ಯರ್ಥಿ ಆಯ್ಕೆ ಬಗ್ಗೆ ಎಂ.ಬಿ ಪಾಟೀಲ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಹೀಗಾಗಿ ಎಲ್ಲರ ಅಭಿಪ್ರಾಯ ಪಡೆದು ತೀರ್ಮಾನ ಮಾಡಿದ ಬಳಿಕ ಸರ್ವಾನುಮತದಿಂದ ಅಭ್ಯರ್ಥಿಯ ಹೆಸರು ಅಂತಿಮಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರು ಇಂದು ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಜಿ.ಮಂಗಳಾಪುರ ಗ್ರಾಮದಲ್ಲಿ ನಡೆದ ತಮ್ಮ ಬೆಂಬಲಿಗ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನಾಗರಾಜು ಅವರ ತಮ್ಮನ ಮಗನ ಬೀಗರೌತಣ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದರು.
ನನ್ನನ್ನು ರಾಜಕೀಯಕ್ಕೆ ಕರೆತಂದಿದ್ದು ಡಿ.ಕೆ.ಶಿವಕುಮಾರ್ : ಜಗ್ಗೇಶ್
ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತ ಮಸ್ಕಿ, ಬಸವಕಲ್ಯಾಣ ಉಪಚುನಾವಣೆಯಿಂದ ಜೆಡಿಎಸ್ ಹಿಂದೆ ಸರಿದ ಬಗ್ಗೆ ಪ್ರತಿಕ್ರಿಯಿಸಿ, ಉಪ ಚುನಾವಣೆಗೂ ಮುನ್ನವೇ ಜೆಡಿಎಸ್ ನವರು ಸೋಲೊಪ್ಪಿಕೊಂಡಿದ್ದಾರೆ ಎಂದು ಕುಟುಕಿದರು.
ಸೋತವರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ : ಸ್ವಪಕ್ಷದವರ ವಿರುದ್ಧ ರೇಣುಕಾಚಾರ್ಯ ಗುಡುಗು
ಇದೇ ವೇಳೆ ಶಿರಾ ಹಾಗೂ ರಾಜರಾಜೇಶ್ವರಿ ನಗರ ಬೈ ಎಲೆಕ್ಷನ್ ಸೋಲಿನ ಬಗ್ಗೆ ಮಾತನಾಡಿ, ಉಪ ಚುನಾವಣೆಯಲ್ಲಿ ಸೋಲಿಗೆ ನಾನು ಸೇರಿದಂತೆ ಎಲ್ಲರೂ ಹೊಣೆಗಾರರು.
ನಾನು ಮುಖ್ಯಮಂತ್ರಿಯಾಗಿದ್ದಾಗ ಎಲ್ಲ ಬೈ ಎಲೆಕ್ಷನ್ ಗೆದ್ದಿದ್ದೆ. ಆದರೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಕೋಟಿಗಟ್ಟಲೆ ದುಡ್ಡು ಹೊಡೆದು ಬೈ ಎಲೆಕ್ಷನ್ ಗೆಲ್ಲುತ್ತಿದ್ದಾರೆ ಎಂದು ಆರೋಪಿಸಿದರು.
ಅಲ್ಲದೆ ರಾಜ್ಯದಲ್ಲಿ ಜೆಡಿಎಸ್ ವೀಕ್ ಆಗಿರೋದ್ರಿಂದ ಅವರ ಮತಗಳು ಬಿಜೆಪಿಗೆ ಬರುತ್ತಿದೆ. ಹೀಗಾಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿಗೆ ಗೆಲುವು ಸುಲಭವಾಗಿದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಮಸ್ಕಿಯಲ್ಲಿ ಕಾಂಗ್ರೆಸ್ ನವರು ನಮ್ಮ ಅಭ್ಯರ್ಥಿಯನ್ನು ಕರೆದುಕೊಂಡು ಹೋಗಿದ್ದಾರೆ ಎಂಬ ವಿಜಯೇಂದ್ರ ಹೇಳಿಕೆಗೆ ಟಾಂಗ್ ನೀಡಿದ ಸಿದ್ದರಾಮಯ್ಯ, 2013ರಲ್ಲಿ ಸದ್ಯ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿರುವ ಪ್ರತಾಪ್ ಗೌಡ 2013ರಲ್ಲಿ ಯಾರ ಕ್ಯಾಂಡಿಡೇಟ್ ಆಗಿದ್ದರು ಎಂದು ಪ್ರಶ್ನಿಸಿದರು.
ಆಪರೇಷನ್ ಕಮಲ ಮಾಡಿದ್ದು ಬಿಜೆಪಿಯ ವಿಜಯೇಂದ್ರ. ಅವರು ಈಗ ನಮ್ಮ ಮೇಲೆ ಆರೋಪ ಮಾಡುತ್ತಿರುವುದು ಎಷ್ಟು ಸರಿ ಎಂದು ಗುಡುಗಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










