ಬೆಳಗಾವಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ನೂತನ ಕಾರಿಗೆ ಬೆಳಗಾವಿಯ ಸದಾಶಿವ ನಗರದ ಸ್ಮಶಾನದ ಮಾನವ ಬಂಧುತ್ವ ವೇದಿಕೆಯಲ್ಲಿ ಬೇಲೂರಿನ ನಿಜಗುಣ ಶಿವಯೋಗಿ ಸ್ವಾಮೀಜಿ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮೌಢ್ಯ ವಿರೋಧಿಸಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ತಾವು ನೂತನವಾಗಿ ಖರೀದಿಸಿರುವ KA-49,N-2023 ನಂಬರಿನ ಫಾರ್ಚೂನರ್ ವಾಹನವನ್ನು ಸ್ಮಶಾನದಿಂದಲೇ ಚಾಲನೆ ನೀಡುವ ಮೂಲಕ ಮೌಢ್ಯ ವಿರೋಧಿಸಿದರು.
ಈ ವೇಳೆ ಬೇಲೂರು ಮಠದ ನಿಜಗುಣಾನಂದ ಸ್ವಾಮೀಜಿ, ಮೈಸೂರಿನ ಜ್ಞಾನ ಪ್ರಕಾಶ ಸ್ಮಾಮೀಜಿ ಸೇರಿದಂತೆ ಇತರ ಸ್ವಾಮೀಜಿಗಳು ಇದ್ದರು.