ಬೆಳಗಾವಿ ಚುನಾವಣೆ | ಹೈಕಮಾಂಡ್ ನಿರ್ಧಾರಕ್ಕೆ ಬದ್ಧ : ಸತೀಶ್ ಜಾರಕಿಹೊಳಿ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಬಿಜೆಪಿ ಕಾಂಗ್ರೆಸ್ ನಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಯಾರಿಗೆ ಟಿಕೆಟ್ ನೀಡಬೇಕು ಅನ್ನೋ ಲೆಕ್ಕಾಚಾರ ಎರಡೂ ಪಕ್ಷಗಳಲ್ಲಿ ನಡೆಯುತ್ತಿದೆ. ಅದರಲ್ಲೂ ಕಾಂಗ್ರೆಸ್ ನಿಂದ ಈ ಬಾರಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಣಕ್ಕಿಳಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಇದೀಗ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿ ಲೋಕಸಭೆ ಉಪಚುನಾವಣೆ ಘೋಷಣೆಯಾಗಿದೆ. ನಾಲ್ಕು ದಿನದ ನಂತರ ಸಭೆ ಮಾಡುತ್ತೇವೆ. ಯಾರಿಗೆ ಟಿಕೆಟ್ ನೀಡಬೇಕು ಅನ್ನೋದು ಹೈಕಮಾಂಡ್ ನಿರ್ಧಾರ ಮಾಡಲಿದೆ.
ನನ್ನ ಹೆಸರು ಸೇರಿದಂತೆ, ಹಲವರ ಹೆಸರು ಕೇಳಿಬರ್ತಿದೆ. ಆದ್ರೆ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಿದ್ದೇವೆ ಎಂದು ತಿಳಿಸಿದ್ದಾರೆ.