ಸರಳವಾಗಿ ನಾಮಪತ್ರ ಸಲ್ಲಿಸಲು ಸತೀಶ್ ಜಾರಕಿಹೊಳಿ ನಿರ್ಧಾರ
ಬೆಳಗಾವಿ : ಕೊರೊನಾ ಎರಡನೇ ಅಲೆ ಹಿನ್ನೆಲೆ ಬೆಳಗಾವಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಸರಳವಾಗಿ ನಾಮಪತ್ರ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ.
ಈ ಸಂಬಂಧ ಸತೀಶ್ ಜಾರಕಿಹೊಳಿ ಪ್ರಕಟಣೆ ಹೊರಡಿಸಿದ್ದು, ನನ್ನನ್ನು ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಪಕ್ಷ ಘೋಷಣೆ ಮಾಡಿದೆ.
ಆದ್ದರಿಂದ ಸೋಮವಾರ ದಿನಾಂಕ 29.03.2021 ರಂದು ಬೆಳಿಗ್ಗೆ ನಾಮನಿರ್ದೇಶನ ಮಾಡಲು ನಿರ್ಣಯಿಸಲಾಗಿದೆ.
ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕೆಪಿಸಿಸಿಯ ಮಾನ್ಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಹಾಗೂ ಸಿದ್ದರಾಮಯ್ಯ ನವರು ಉಪಸ್ಥಿತರಿರುತ್ತಾರೆ.
ನಾಮನಿರ್ದೇಶನ ಮಾಡಲು ಹಿಂದಿನಂತೆ ಯಾವುದೇ ಆಡಂಬರ, ಮೆರವಣಿಗೆ ಮಾಡದೇ, ಅತ್ಯಂತ ಸರಳವಾಗಿ ಪಕ್ಷದ ಮುಖಂಡರು ಮಾತ್ರ ಭಾಗವಹಿಸಲು ನಿರ್ಧರಿಸಲಾಗಿದೆ.
ಇದನ್ನ ಪಕ್ಷದ ಕಾರ್ಯಕರ್ತರು ಗಮನಿಸಬೇಕಾಗಿ ಸತೀಶ್ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ.
ಬೆಳಗಾವಿ ಕ್ಷೇತ್ರದ ಉಪ ಚುನಾವಣೆ ಏಪ್ರಿಲ್ 17ರಂದು ಮತದಾನ ನಡೆಯಲಿದೆ. ಮಾರ್ಚ್ 29ರಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿದ್ದಾರೆ.
