ಮಹಾರಾಷ್ಟ್ರದಲ್ಲಿ ಶನಿವಾರ ಕಂಪಿಸಿದ ಭೂಮಿ
ಸತಾರ, ಅಗಸ್ಟ್ 16: ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭೂಮಿ ಕಂಪಿಸಿದೆ. ಕಂಪನದ ತೀವ್ರತೆ ಪ್ರಮಾಣವು ರಿಕ್ಟರ್ ಮಾಪಕದಲ್ಲಿ 3.1ರಷ್ಟು ದಾಖಲಾಗಿದೆ. ಯಾವುದೇ ಸಾವು- ನೋವು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಿಗ್ಗೆ 10.22ರ ಸುಮಾರಿಗೆ ಭೂಕಂಪನ ಸಂಭವಿಸಿದೆ. ಸತಾರದ ಕೊಯ್ನಾ ಅಣೆಕಟ್ಟಿನಿಂದ 13.60 ಕಿ.ಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೊಯ್ನಾ ಅಣೆಕಟ್ಟು ಬಳಿ ಶನಿವಾರ ಬೆಳಿಗ್ಗೆ ಭೂಮಿ ಕಂಪಿಸಿದೆ. ಕಂಪನವು ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆ ಪ್ರಮಾಣವನ್ನು ದಾಖಲಿಸಿದೆ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.








