ಕೋವಿಡ್-19 ಸೋಂಕಿನ ಈ ಸಂಕಷ್ಟ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರು ದೇಶದ ಜೊತೆ ಕೈಜೊಡಿಸುತ್ತಿದ್ದಾರೆ. ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಖದ ಮಾಸ್ಕ್ ಗೆ ಬಹಳಷ್ಟು ಬೇಡಿಕೆ ಉಂಟಾಗಿದೆ. ಅನೇಕ ಸಂಘಸಂಸ್ಥೆಗಳು ಈಗಾಗಲೇ ಮಾಸ್ಕ್ ಅನ್ನು ಬಡಜನರಿಗೆ ತಯಾರಿಸಿ ಹಂಚುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ದೇಶದ ಪ್ರಥಮ ಪ್ರಜೆ ರಾಮನಾಥ ಕೋವಿಂದ್ ಅವರ ಪತ್ನಿ ಸವಿತಾ ಕೋವಿಂದ್ ಅವರು ಕೂಡ ಮಾಸ್ಕ್ ತಯಾರಿಸುವ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈ ಮೂಲಕ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಡೋಣ, ನಾವು ನಿಮ್ಮೊಂದಿಗೆ ಇದ್ದೇವೆ ಎಂಬ ಸಂದೇಶವನ್ನು ಜನರಿಗೆ ರವಾನಿಸಿದ್ದಾರೆ.
ದೇಶ ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಜವಾಬ್ದಾರಿಯುತ ಸ್ಥಾನ ದಲ್ಲಿ ಇರುವವರು ಜನರಿಗೆ ಪ್ರೇರಣೆ ಯಾಗುವ ಕೆಲಸದಲ್ಲಿ ತೊಡಗಿಸಿಕೊಂಡಿರುವುದು ಎಲ್ಲರಿಗೂ ಮಾದರಿ.
ಸವಿತಾ ಕೋವಿಂದ್ ಅವರು ತಯಾರಿಸಿರುವ ಮಾಸ್ಕ್ ಗಳನ್ನು ದೆಹಲಿಯ ಆಶ್ರಯ ಸುಧಾರಣಾ ಮಂಡಳಿಯ ವಿವಿಧ ಆಶ್ರಯ ಮನೆಗಳಿಗೆ ವಿತರಿಸಲಾಗುವುದು.
ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್
ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...








