ತೆಲುಗು ನಟ ಸಯಾಜಿ ಶಿಂಧೆ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇತ್ತೀಚೆಗಷ್ಟೇ ಅಂದರೆ ಏ. 11ರಂದು ಅವರು ಆಸ್ಪತ್ರೆಗೆ ದಾಖಲಾಗತ್ತು. ಈಗ ಪರೀಕ್ಷೆಗಳನ್ನು ನಡೆಸಲಾಗಿದ್ದು, ಹೃದಯದಲ್ಲಿ ಬ್ಲಾಕೇಜ್ ಇದೆ ಎನ್ನುವ ವಿಚಾರ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಆಂಜಿಯೋಪ್ಲಾಸ್ಟಿ ಮಾಡಿದ್ದಾರೆ.
ಹೀಗಾಗಿ ನಟ ಸಯಾಜಿ ವಿಡಿಯೋ ಮಾಡಿ, ‘ನಾನು ಆರೋಗ್ಯವಾಗಿದ್ದೇನೆ. ನನ್ನ ಬಗ್ಗೆ ಕಾಳಜಿವಹಿಸುವ ಎಲ್ಲಾ ಅಭಿಮಾನಿಗಳು ಚಿಂತಿಸುವುದು ಬೇಡ. ನಾನು ಸದ್ಯದಲ್ಲಿಯೇ ನಿಮ್ಮನ್ನು ಮನರಂಜಿಸುತ್ತೇನೆ ಎಂದು ಹೇಳಿದ್ದಾರೆ.
ಅಭಿಮಾನಿಗಳು ಮೊದಲು ನಿಮ್ಮ ಆರೋಗ್ಯ ಸುಧಾರಿಸಲಿ ಎಂದು ಹೇಳಿದ್ದಾರೆ. ಸಯಾಜಿ ಹೃದಯ ರಕ್ತನಾಳದಲ್ಲಿ ಶೇ. 99ರಷ್ಟು ಬ್ಲಾಕೇಜ್ ಇರುವುದು ಗೊತ್ತಾಗಿದೆ. ಸದ್ಯ ಅವರ ಆರೋಗ್ಯ ಸುಧಾರಿಸಿದೆ. ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು ಎಂದು ವೈದ್ಯರು ಹೇಳಿದ್ದಾರೆ.