SBI Recruitment 2022: 1422 CBO ಹುದ್ದೆಗಳಿಗೆ ನೇಮಕಾತಿ ಅಹ್ವಾನ…
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸರ್ಕಲ್ ಬೇಸ್ಡ್ ಆಫೀಸರ್ಸ್ (CBO) ಹುದ್ದೆಗೆ 1400 ರೆಗ್ಯುಲರ್ ಮತ್ತು 22 ಬ್ಯಾಕ್ ಲಾಗ್ ಹುದ್ದೆಗಳನ್ನ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಎಸ್ಬಿಐ ವೆಬ್ಸೈಟ್ನ ಕೆರಿಯರ್ ಪೋರ್ಟಲ್, sbi.co.in ಅಥವಾ ibpsonline.ibps.in ನಲ್ಲಿ ಆನ್ ಲೈನ್ ಮೂಲಕ ಅರ್ಜಿಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 7. ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಡಿಸೆಂಬರ್ 4 ರಂದು ನಿಗದಿಪಡಿಸಲಾಗಿದೆ.
ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು ಅಥವಾ ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ (IDD) ಮತ್ತು ವೈದ್ಯಕೀಯ, ಎಂಜಿನಿಯರಿಂಗ್, ಚಾರ್ಟರ್ಡ್ ಅಕೌಂಟೆಂಟ್, ಕಾಸ್ಟ್ ಅಕೌಂಟೆಂಟ್ನಂತಹ ಅರ್ಹತೆಗಳನ್ನು ಸಹ ಸ್ವೀಕರಿಸಲಾಗುತ್ತದೆ.
ಈ ಹುದ್ದೆಗಳಿಗೆ ಸೆಪ್ಟೆಂಬರ್ 30 ರ ಒಳಗಾಗಿ 21-30 ವರ್ಷ ವಯೋಮಿತಿ ಇದ್ದು, ಮೀಸಲಾತಿ ಹೊಂದಿರುವ ಅಭ್ಯರ್ಥಿಗಳಿಗೆ ಸಡಿಲಿಕೆ ಇರುತ್ತದೆ.
SBI Recruitment 2022: Recruitment Invitation for 1422 CBO Posts…