ಶ್ರೀಲಂಕಾ ಗೆ 1 ಶತಕೋಟಿ ಅಮೆರಿಕನ್ ಡಾಲರ್ ಸಾಲ ನೀಡಿದ SBI ಬ್ಯಾಂಕ್
ಆಹಾರ, ಔಷಧಿಗಳು ಮತ್ತು ಇತರ ಅಗತ್ಯ ವಸ್ತುಗಳ ಖರೀದಿಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಶ್ರೀಲಂಕಾಕ್ಕೆ USD 1 ಶತಕೋಟಿ ಸಾಲ ಸೌಲಭ್ಯವನ್ನು ಒದಗಿಸಲಿದೆ ಎಂದು ಹಣಕಾಸು ಸಚಿವಾಲಯ ಗುರುವಾರ ಹೇಳಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಶ್ರೀಲಂಕಾದ ಹಣಕಾಸು ಸಚಿವ ಬಸಿಲ್ ರಾಜಪಕ್ಸೆ ಅವರನ್ನು ಭೇಟಿಯಾದರು ಎಂದು ಸಚಿವಾಲಯ ಟ್ವೀಟ್ ಮಾಡಿ ತಿಳಿಸಿದೆ.
“ಶ್ರೀಲಂಕಾಕ್ಕೆ ಆಹಾರ, ಔಷಧ ಮತ್ತು ಇತರ ಅಗತ್ಯ ವಸ್ತುಗಳನ್ನು ಸಂಗ್ರಹಿಸಲು USD 1 ಶತಕೋಟಿ ಸಾಲ ಸೌಲಭ್ಯಕ್ಕಾಗಿ SBI ಮತ್ತು ಶ್ರೀಲಂಕಾ ಸರ್ಕಾರದ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ” ಎಂದು ಸಚಿವಾಲಯ ಮತ್ತೊಂದು ಟ್ವೀಟ್ನಲ್ಲಿ ತಿಳಿಸಿದೆ.
ಈ ಹಿಂದೆ, ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಶ್ರೀಲಂಕಾಕ್ಕೆ ಪೆಟ್ರೋಲಿಯಂ ಉತ್ಪನ್ನಗಳ ಖರೀದಿಗೆ ಹಣಕಾಸು ಒದಗಿಸಲು ರಫ್ತು-ಆಮದು ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಮ್ ಬ್ಯಾಂಕ್) USD 500 ಮಿಲಿಯನ್ ಸಾಲವನ್ನು ವಿಸ್ತರಿಸಿತ್ತು.