SC, ST ಸಮುದಾಯಕ್ಕೆ ಮೀಸಲಾತಿ : ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿ ವರದಿ ಚರ್ಚೆ
ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಜಾತಿಗಳಿಗೆ ಮೀಸಲಾತಿ ನಿಗದಿಪಡಿಸುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.
ಈ ಸಭೆಯಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಸಲ್ಲಿಸಿದ್ದ ವರದಿಯನ್ನು ವಿಸ್ತೃತವಾಗಿ ಚರ್ಚೆ ನಡೆಸಲಾಗಿದೆ.
ನಾಗಮೋಹನ್ ದಾಸ್ ಸಮಿತಿಯ ಶಿಫಾರಸು ಏನು ?
ನಾಗಮೋಹನ್ ದಾಸ್ ಸಮಿತಿಯು ಎಸ್ ಸಿ ಮೀಸಲಾತಿಯನ್ನು ಶೇಕಡಾ 15 ರಿಂದ ಶೇಕಡಾ 17ಕ್ಕೆ, ಎಸ್ ಟಿ ಮೀಸಲಾತಿಯನ್ನು ಶೇಕಡಾ 3 ರಿಂದ 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ.
ಒಂದು ವೇಳೆ ಈ ಶಿಫಾರಸು ಜಾರಿ ಮಾಡಿದರೆ ಮೀಸಲಾತಿ ಪ್ರಮಾಣವು ಒಟ್ಟಾರೆ ಶೇಕಡಾ 56ಕ್ಕೆ ಹೆಚ್ಚಳವಾಗುತ್ತದೆ.

ಆದ್ರೆ ಮೀಸಲಾಯಿಯನ್ನು ಶೇಕಡಾ 50ಕ್ಕಿಂತ ಹೆಚ್ಚಿಗೆ ನಿಗದಿಪಡಿಸಬಾರದು ಎಂದು ಸುಪ್ರಿಂ ಕೋರ್ಟ್ ಸೂಚನೆ ನೀಡಿದೆ.
ಅಂದಹಾಗೆ ವಿಧಾನಸಭೆ ಅಧಿವೇಶನದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿತ್ತು.
ಆ ವೇಳೆ ಸಿಎಂ ಸರ್ವಪಕ್ಷಗಳ ಸಭೆ ನಡೆಸುವ ಭರವಸೆ ನೀಡಿದ್ದರು. ಅದರಂತೆ ಇಂದು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಿವಾಸದಲ್ಲಿ ಸಭೆ ನಡೆಯಿತು.
ಇನ್ನು ಎಸ್ಸಿ, ಎಸ್ಟಿ ಮೀಸಲಾತಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಸಾಮಾಜಿಕವಾಗಿಯೂ ಹಲವು ಸಮಸ್ಯೆ ಬಗೆಹರಿಸಲು ನಾವು ಬದ್ಧರಾಗಿದ್ದೇವೆ.
ಜನಪರವಾಗಿರುವ ಆಡಳಿತವನ್ನ ನಮ್ಮ ಸರ್ಕಾರ ನೀಡುತ್ತಿದೆ. ಚುನಾವಣೆಯ ದೃಷ್ಟಿಯಿಂದ ಇದು ಮಹತ್ವದ ಅಂಶ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.