ಬೆಂಗಳೂರು: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಸಾಧಾರಣ ಹಾಗೂ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು: ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಾದ ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಸಾಧಾರಣ ಹಾಗೂ ಕೆಲವು ಕಡೆ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು: ಅದೇ ರೀತಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಕರಾವಳಿ: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಮಲೆನಾಡು: ಮಲೆನಾಡು ಜಿಲ್ಲೆಗಳಲ್ಲೂ ಚೆದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ: ರಾಜಧಾನಿ ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಂದಿನ 2 ದಿನಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಹಾಗೂ ತುಂತುರು ಮಳೆ ನಿರೀಕ್ಷೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel