ಕಾರವಾರ: ಈಜಲು ತೆರಳಿದ್ದ ನಾಲ್ವರು ನೀರು ಪಾಲಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ಈ ಘಟನೆ ನಡೆದಿದೆ. ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದ ನಾಲ್ವರು ಸಮುದ್ರದ ಪಾಲಾಗಿದ್ದಾರೆ. ಸುಮಾರು 54 ವಿದ್ಯಾರ್ಥಿಗಳು ಕಡಲ ತೀರದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ನಾಲ್ವರು ಬಾಲಕರು ಕೊಚ್ಚಿಕೊಂಡು ಹೋಗಿದ್ದಾರೆ. ಓರ್ವ ವಿದ್ಯಾರ್ಥಿ ಶವ ಪತ್ತೆಯಾಗಿದ್ದು, ಇನ್ನುಳಿದ ಮೂವರು ವಿದ್ಯಾರ್ಥಿಗಳಿಗೆ ಶೋಧ ಕಾರ್ಯ ನಡೆದಿದೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕೊತ್ತೂರು ಶಾಲೆ ವತಿಯಿಂದ ವಿದ್ಯಾರ್ಥಿಗಳು ಬಂದಿದ್ದರು. ಈ ಸಂದರ್ಭದಲ್ಲಿ ದುರ್ಘಟನೆ ನಡೆದಿದೆ.








