ಶಿವಮೊಗ್ಗ: ಖಾಸಗಿ ಶಾಲಾ ಬಸ್ ಪಲ್ಟಿಯಾಗಿದ್ದು, 25ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಿಳಕಿ ಗ್ರಾಮದ ಹತ್ತಿರ ನಡೆದಿದ್ದು, ಸ್ಫೂರ್ತಿ ಇಂಟರ್ ನ್ಯಾಷನಲ್ ಶಾಲೆಗೆ ಸೇರಿದ ಶಾಲಾ ಬಸ್ ಪಲ್ಟಿಯಾಗಿದೆ. ಈ ಬಸ್ ಎದುರು ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡಲು ಹೋಗಿ ಪಲ್ಟಿಯಾಗಿದೆ ಎನ್ನಲಾಗಿದೆ. ಸದ್ಯ ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಭದ್ರಾವತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.