ರಾಯಚೂರು raichur | ಸರ್ಕಾರಿ ಶಾಲೆಯಲ್ಲಿ ಬೆಂಕಿ
ರಾಯಚೂರು : ಜಿಲ್ಲೆಯ ದೇವದುರ್ಗದ ಜಾಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪುಸ್ತಕ, ಬಿಸಿಯೂಟದ ದವಸ ಧಾನ್ಯಗಳು ಸುಟ್ಟು ಭಸ್ಮವಾಗಿವೆ.
ಜಾಲಹಳ್ಳಿ ಸರ್ಕಾರಿ ಕನ್ಯಾ ಪ್ರೌಢ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಅವಘಡದಲ್ಲಿ ಬಿಸಿಯೂಟದ ದವಸ ಧಾನ್ಯ, ಬೈಸಿಕಲ್, ಪುಸ್ತಕಗಳು ಸೇರಿ ವಿವಿಧ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಬೆಳಗಿನ ಜಾವ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳೀಯರು ಶಾಲೆಯಿಂದ ಹೊಗೆ ಬರುತ್ತಿರುವುದನ್ನ ಗಮನಿಸಿ ಮುಖ್ಯೋಪಾಧ್ಯಾಯರು ಹಾಗೂ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಘಟನೆ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಶಾಕೀಲ್ ಸಾಬ್ ದೂರು ದಾಖಲಿಸಿದ್ದಾರೆ.