ಮಂಡ್ಯ: ಸಾಲ ಮರುಪಾವತಿ ಮಾಡದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಆಪ್ತನ ಶಿಕ್ಷಣ ಸಂಸ್ಥೆಗೆ ಬ್ಯಾಂಕ್ ಸಿಬ್ಬಂದಿ ಬೀಗ ಜಡಿದಿದ್ದಾರೆ.
ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲು ಹತ್ತಿರ ಇರುವ ಕೇಂಬ್ರಿಡ್ಜ್ ಸ್ಕೂಲ್ ಮತ್ತು ಕಾಲೇಜಿಗೆ ಬ್ಯಾಂಕ್ ಅಧಿಕಾರಿಗಳು ಬೀಗ ಹಾಕಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದೆ. ಪಾಲಕರು ಕೂಡ ಆತಂಕದಲ್ಲಿ ಇರುವಂತಾಗಿದೆ. ಡಿಕೆಶಿ ಆಪ್ತನಾದ ಹರಳಹಳ್ಳಿ ವಿಶ್ವನಾಥ್‌ಗೆ ಸೇರಿದ ಸ್ಕೂಲ್ ಇದಾಗಿದೆ.
ಶಾಲೆಯ ಮಾಲೀಕ ಬೆಂಗಳೂರಿನ ವಿಶ್ವೇಶ್ವರಯ್ಯ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಶಾಲೆಯ ಮೇಲೆ ಸಾಲ ಮಾಡಿದ್ದ. ಆದರೆ, ಸರಿಯಾಗಿ ಸಾಲ ಕಟ್ಟಿರಲಿಲ್ಲ. ಹೀಗಾಗಿ ಬ್ಯಾಂಕ್ ನಿಂದ ಹಲವು ಬಾರಿ ನೋಟಿಸ್ ನೀಡಲಾಗಿತ್ತು. ಆದರೂ ಸಾಲ ಕಟ್ಟದ ಹಿನ್ನೆಲೆಯಲ್ಲಿ ಸಿಬ್ಬಂದಿಯು ಬೀಗ ಜಡಿದಿದ್ದಾರೆ.
ಹೀಗಾಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿ, ಮಕ್ಕಳ ಭವಿಷ್ಯದ ಕುರಿತು ಚಿಂತಾಕ್ರಾಂತರಾಗಿದ್ದಾರೆ.